ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'

ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿದ ವೇಳೆ ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್‌ ಹಾಗೂ ಪೆನ್ ಡ್ರೈವ್ ಪತ್ತೆಯಾಗಿತ್ತು.
DGP Alok Kumar warns Prajwal Revanna over mobile phone found in Jail
ಪ್ರಜ್ವಲ್ ರೇವಣ್ಣ - ಅಲೋಕ್ ಕುಮಾರ್
Updated on

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಡಿ(ಎಸ್) ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬಳಿ ಮೊಬೈಲ್ ಪತ್ತೆಯಾದ ನಂತರ ತೀವ್ರ ಆಕ್ರೋಶಗೊಂಡಿರುವ ಡಿಜಿಪಿ ಅಲೋಕ್ ಕುಮಾರ್ ಅವರು ಮಾಜಿ ಸಂಸದನಿಗೆ ಜೈಲಿನಲ್ಲೇ ಸ್ಪೆಷಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿದ ವೇಳೆ ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್‌ ಹಾಗೂ ಪೆನ್ ಡ್ರೈವ್ ಪತ್ತೆಯಾಗಿತ್ತು.

ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ದಿಢೀರ್ ಭೇಟಿ ನೀಡಿದ ಅಲೋಕ್ ಕುಮಾರ್ ಅವರು, ಹಲವು ಬ್ಯಾರಕ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಮಾತ್ರ ಸುಮಾರು 10ರಿಂದ 12 ನಿಮಿಷಗಳ ಕಾಲ ವಿಶೇಷವಾಗಿ ಮಾತನಾಡಿದ್ದಾರೆ. ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆಯಾದ ವಿಚಾರಕ್ಕೆ ಅಲೋಕ್ ಕುಮಾರ್ ಅವರ ಮೇಲೆ ಗರಂ ಆಗಿದ್ದಾರೆ. ಇದೇ ವಿಚಾರಕ್ಕೆ ಅಲೋಕ್ ಕುಮಾರ್ ಅವರ ಪ್ರಜ್ವಲ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

DGP Alok Kumar warns Prajwal Revanna over mobile phone found in Jail
ಪರಪ್ಪನ ಅಗ್ರಹಾರ ಜೈಲಿನಲ್ಲೂ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್‌ಡ್ರೈವ್ ಪತ್ತೆ: ಮಾಜಿ ಸಂಸದನ ವಿರುದ್ಧ ಕೇಸ್ ದಾಖಲು

ಪರಪ್ಪನ ಅಗ್ರಹಾರ ಜೈಲಿನಲ್ಲೂ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್‌ಡ್ರೈವ್ ಪತ್ತೆ: ಮಾಜಿ ಸಂಸದನ ವಿರುದ್ಧ ಕೇಸ್ ದಾಖಲುನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹಾಳಾಗಿದೆ. ನನ್ನ ಕೆರಿಯರ್‌ನಲ್ಲಿ ನನಗೆ ಯಾವಾಗಲೂ ಇಷ್ಟು ಬೇಜಾರಾಗಿರಲಿಲ್ಲ. ನಾನು ನಿಮ್ಮಿಂದ ತಲೆ ತಗ್ಗಿಸುವಂತಾಯ್ತು ಎಂದು ಅಲೋಕ್ ಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ಮುಂದೆ ಆದ್ರೂ ನೆಟ್ಟಗಿರಿ, ಜೈಲ್ ನಿಯಮಾವಳಿ ಪಾಲಿಸಬೇಕು ಎಂದು ಡಿಜಿಪಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಪ್ರಜ್ವಲ್ ರೇವಣ್ಣ, ಇಲ್ಲ ಸಾರ್, ನಾನೇನು ಮಾಡಿಲ್ಲ ಸಾರ್ ಎಂದು ವಾದಿಸಿದ್ದಾರೆ.

ನನಗೆಲ್ಲಾ ಗೊತ್ತಿದೆ, ಸಾಕು ನಿಲ್ಸಿ ನಿಮ್ ಡ್ರಾಮಾ. ನಿಮಗೆ ಮೊಬೈಲ್ ಕೊಟ್ಟವರಾರು..? ನೀವು ಹೇಳದಿದ್ರೆ ಬೇರೆ ಆ್ಯಕ್ಷನ್ ತಗೊಬೇಕಾಗುತ್ತೆ. ನೆಕ್ಸ್ಟ್ ಈ ರೀತಿ ಆದ್ರೆ, ಮೊಬೈಲ್ ಕಂಡುಬಂದ್ರೆ ನಾನು ಸುಮ್ಮನಿರೊಲ್ಲ ಅಲೋಕ್ ಕುಮಾರ್ ವಾರ್ನ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com