ವಿಜಯಪುರ: ಆಸ್ತಿ ವಿಚಾರಕ್ಕೆ ಜಗಳ, ಪುತ್ರಿ-ಪ್ರಿಯಕರನಿಂದ ತಂದೆ ಹತ್ಯೆ-Video

ನಿವೃತ್ತ ಶಿಕ್ಷಕ ಸಿದ್ದಪ್ಪ ಅಂಜುತಗಿ ಅವರ ಮೃತದೇಹ ರಸ್ತೆ ಬದಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಅಪರಿಚಿತ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದರು.
Two of the accused have been arrested, while a third is on the run
ಎಡಬದಿಯಲ್ಲಿರುವುದು ನಿವೃತ್ತ ಶಿಕ್ಷಕ ಭಾವಚಿತ್ರ, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿ ತಲೆಮರೆಸಿಕೊಂಡಿದ್ದಾನೆ.
Updated on

ವಿಜಯಪುರ: ಆಸ್ತಿ ವಿವಾದ ಹಾಗೂ ಮಗಳ ಪ್ರೇಮ ಸಂಬಂಧಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರಿಂದ, 62 ವರ್ಷದ ನಿವೃತ್ತ ಶಿಕ್ಷಕರೊಬ್ಬರನ್ನು ಅವರ ಪುತ್ರಿ, ಆಕೆಯ ಪ್ರಿಯಕರ ಮತ್ತು ಮತ್ತೊಬ್ಬ ವ್ಯಕ್ತಿ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.

ನಿವೃತ್ತ ಶಿಕ್ಷಕ ಸಿದ್ದಪ್ಪ ಅಂಜುತಗಿ ಅವರ ಮೃತದೇಹ ರಸ್ತೆ ಬದಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಅಪರಿಚಿತ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದರು.

ತನಿಖೆ ವೇಳೆ ಸಿದ್ದಪ್ಪ ಅವರ ಹಿರಿಯ ಪುತ್ರಿ ನಿಖಿತಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದಾಗ, ಅವರ ಕಿರಿಯ ಪುತ್ರಿ ಪ್ರಿಯಾಂಕಾ ಪ್ರಕರಣದಲ್ಲಿ ಭಾಗಿಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದರು.

ಸಿದ್ದಪ್ಪ ಅವರು ಸುಮಾರು ಎರಡು ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ನಿವೃತ್ತಿ ಸೌಲಭ್ಯಗಳನ್ನು ಪಡೆದಿದ್ದರು. ತಮ್ಮ ಗ್ರಾಮದಲ್ಲಿ ಅವರಿಗೆ ಜಮೀನು ಹಾಗೂ ಇತರ ಆಸ್ತಿಯೂ ಇತ್ತು. ಆಸ್ತಿ ವಿಚಾರವಾಗಿ ಸಿದ್ದಪ್ಪ ಮತ್ತು ಪ್ರಿಯಾಂಕಾ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು.

ಪ್ರಿಯಾಂಕಾ ಪತಿ ಸುರೇಶ್ ಮಸಾಲಿ ಕೋವಿಡ್‌ ಅವಧಿಯಲ್ಲಿ ಮೃತಪಟ್ಟಿದ್ದರು. ಬಳಿಕ ವಿಜಯಪುರದಲ್ಲಿ ವಾಸಿಸುತ್ತಿದ್ದ ಸಂದರ್ಭದಲ್ಲಿ ಅವರು ಆಟೋ ಚಾಲಕ ಸಂತೋಷ್ ಸಿಂಧೆ ಎಂಬಾತನೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದರು. ಈ ಸಂಬಂಧಕ್ಕೆ ಸಿದ್ದಪ್ಪ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಆಸ್ತಿಯಲ್ಲಿ ಪ್ರಿಯಾಂಕಾಗೆ ಪಾಲು ನೀಡಲು ಕೂಡ ನಿರಾಕರಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಈ ವಿಚಾರಗಳೇ ತಂದೆ-ಮಗಳ ನಡುವಿನ ಜಗಳಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಆಗಸ್ಟ್ 15ರಂದು ಆಸ್ತಿ ವಿಚಾರವಾಗಿ ಪ್ರಿಯಾಂಕಾ ಮತ್ತು ಸಿದ್ದಪ್ಪ ನಡುವೆ ಮತ್ತೊಮ್ಮೆ ಜಗಳ ನಡೆದಿದೆ. ಜಗಳ ತೀವ್ರಗೊಂಡ ಬಳಿಕ ಆಕೆ ಸಂತೋಷ್‌ಗೆ ಮನೆಗೆ ಬರುವಂತೆ ಕರೆ ಮಾಡಿದ್ದಾಳೆ.

ಅಂದು ರಾತ್ರಿ ಸಂತೋಷ್ ತನ್ನ ಸ್ನೇಹಿತ ಗುರುರಾಜ್ ಬಿರಾದಾರ್‌ನೊಂದಿಗೆ ಮನೆಗೆ ಬಂದಿದ್ದಾನೆ. ಇಬ್ಬರೂ ಮೊದಲು ಸಿದ್ದಪ್ಪ ಅವರ ಕುತ್ತಿಗೆ ಹಿಸುಕಿ, ಬಳಿಕ ದೊಡ್ಡ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಸಿದ್ದಪ್ಪ ಮೃತಪಟ್ಟಿದ್ದಾರೆ. ನಂತರ ಮೃತದೇಹವನ್ನು ರಸ್ತೆ ಬದಿಗೆ ಎಸೆದು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಪ್ರಿಯಾಂಕಾ ಮತ್ತು ಸಂತೋಷ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಗುರುರಾಜ್ ಬಿರಾದಾರ್‌ಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

Two of the accused have been arrested, while a third is on the run
ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಯುವತಿಯರಿಬ್ಬರು ಹೊಡೆದಾಡಿಕೊಂಡಿದ್ದೇಕೆ? Video ನೋಡಿ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com