ಬಿಡದಿ ಟೌನ್‌ಶಿಪ್‌ ವಿರುದ್ಧ ದಳಪತಿಗಳ ರಣಕಹಳೆ: ಜೆಡಿಎಸ್ ನಿಂದ ' ವಿಧಾನ ಸೌಧ ಚಲೋ'-Video

ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ, ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ವಿಧಾನ ಪರಿಷತ್‌ ಸದಸ್ಯರು ಹಾಗೂ ಇತರ ಹಿರಿಯ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
JDS protest against Bidadi township
ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಹೋರಾಟ
Updated on

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಮಂಗಳವಾರ ಸಾರ್ವಜನಿಕ ಸಭೆ ಹಾಗೂ ‘ವಿಧಾನಸೌಧ ಚಲೋ’ ಪ್ರತಿಭಟನೆಯನ್ನು ನಡೆಸಿತು. ಕಾಂಗ್ರೆಸ್‌ ಸರ್ಕಾರದ ಪ್ರಸ್ತಾವಿತ ಬಿಡದಿ ಟೌನ್‌ಶಿಪ್‌ ಯೋಜನೆಗಾಗಿ ಭೂಸ್ವಾಧೀನ ಮಾಡುವ ಕ್ರಮವನ್ನು ವಿರೋಧಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ, ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ವಿಧಾನ ಪರಿಷತ್‌ ಸದಸ್ಯರು ಹಾಗೂ ಇತರ ಹಿರಿಯ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಜೆಡಿಎಸ್‌ ಕಾರ್ಯಕರ್ತರು, ರೈತರು ಹಾಗೂ ಬೆಂಬಲಿಗರು ಸೇರಿದಂತೆ ಸುಮಾರು 4,000–5,000 ಮಂದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದರು. ಪ್ರಸ್ತಾವಿತ ಟೌನ್‌ಶಿಪ್‌ ಯೋಜನೆ ಮತ್ತು ಭೂಸ್ವಾಧೀನ ಪ್ರಕ್ರಿಯೆ ಬಗ್ಗೆ ಅವರು ಆಕ್ಷೇಪ ವ್ಯಕ್ತಪಡಿಸಿದರು.

JDS protest against Bidadi township
NICE ಯೋಜನೆ ವಶಕ್ಕೆ ಪಡೆಯಲು ಯತ್ನಿಸುತ್ತಿರುವವರು ಯಾರು? H D ಕುಮಾರಸ್ವಾಮಿ ಪ್ರಶ್ನೆ-Video

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com