ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ಘೋಷಣೆ!

ಕರ್ನಾಟಕದ ಅರಣ್ಯದಲ್ಲಿ ಮೃತಪಟ್ಟ ತಮಿಳು ಮೂಲದ ಮೂವರ ಕುಟುಂಬಗಳಿಗೆ ತಮಿಳುನಾಡು ಅರಣ್ಯ ಇಲಾಖೆ ತಲಾ 10 ಲಕ್ಷ ರೂ. ಪರಿಹಾರ ನೀಡಲಿದೆ ಎಂದು ಅರಣ್ಯ ಸಚಿವ ಆರ್‌ವಿ ರಂಜಿತ್‌ಕುಮಾರ್ ಅವರು ಇಂದು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.
Tamil Nadu government announces ₹10 lakh compensation for families of three Tamils killed by Karnataka Forest personnel
ತಮಿಳುನಾಡು ವಿಧಾನಸಭೆ
Updated on: 

ಚೆನ್ನೈ: ಚಾಮರಾಜನಗರ ಜಿಲ್ಲೆಯ ಹನೂರು ವನ್ಯಜೀವಿ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಬಲಿಯಾದ ಮೂವರು ಶಂಕಿತ ಬೇಟೆಗಾರರ ಕುಟುಂಬಕ್ಕೆ ತಮಿಳುನಾಡು ಸರ್ಕಾರ ಮಂಗಳವಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಕರ್ನಾಟಕದ ಅರಣ್ಯದಲ್ಲಿ ಮೃತಪಟ್ಟ ತಮಿಳು ಮೂಲದ ಮೂವರ ಕುಟುಂಬಗಳಿಗೆ ತಮಿಳುನಾಡು ಅರಣ್ಯ ಇಲಾಖೆ ತಲಾ 10 ಲಕ್ಷ ರೂ. ಪರಿಹಾರ ನೀಡಲಿದೆ ಎಂದು ಅರಣ್ಯ ಸಚಿವ ಆರ್‌ವಿ ರಂಜಿತ್‌ಕುಮಾರ್ ಅವರು ಇಂದು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.

ಇಂದು ತಮಿಳುನಾಡು ವಿಧಾನ ಸಭೆಯಲ್ಲೂ ಹನೂರು ಶೂಟೌಟ್​​ ವಿಚಾರ ಪ್ರಸ್ತಾಪವಾಗಿದ್ದು, ಡಿಎಂಕೆ ಮತ್ತು ಎಐಡಿಎಂಕೆ ಮುಖಂಡರು ಈ ಬಗ್ಗೆ ಸದನದಲ್ಲಿ ಧ್ವನಿ ಎತ್ತಿದರು. ಈ ವೇಳೆ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಅರಣ್ಯ ಸಚಿವ ರಂಜಿತ್ ಕುಮಾರ್ ಘೋಷಿಸಿದ್ದು, ಕರ್ನಾಟಕ ಸರ್ಕಾರವು ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂಬ ಆಗ್ರಹವೂ ವ್ಯಕ್ತವಾಗಿದೆ.

Tamil Nadu government announces ₹10 lakh compensation for families of three Tamils killed by Karnataka Forest personnel
ಹನೂರು ಶೂಟೌಟ್ ಪ್ರಕರಣ: ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ, ನಿಮ್ಮ ಕೆಲಸ ನೋಡ್ಕೊಳ್ಳಿ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್!

ಮೃತರೆಲ್ಲರೂ ತಮಿಳುನಾಡು ಮೂಲದವರು. ಮೆಟ್ಟೂರು ಜಲಾಶಯ ನಿರ್ಮಾಣದಿಂದ ಹನೂರಿನಲ್ಲಿ ಅವರು ವಾಸವಿದ್ದು, ಅವರೆಲ್ಲ ತಮಿಳರು. ಅವರ ರಕ್ಷಣೆಯಾಗಬೇಕು ಎಂಬ ಅಭಿಪ್ರಾಯಗಳು ಸದನದಲ್ಲಿ ವ್ಯಕ್ತವಾಗಿವೆ.

ಅರಣ್ಯಾಧಿಕಾರಿಗಳು ಬಿಡುಗಡೆ ಮಾಡಿದ ಫೋಟೋಗಳಲ್ಲಿ ಸ್ಟಿಕ್ಕರ್ ತೆಗೆಯದ ಹೊಸ ಚಪ್ಪಲಿ ಇರುವ ಬಗ್ಗೆಯೂ ಚರ್ಚೆಯಾಗಿದೆ. ಮೃತರ ಕುಟುಂಬಕ್ಕೆ ಕರ್ನಾಟಕ ಸರ್ಕಾರ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಮತ್ತು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ತಮಿಳುನಾಡು ಶಾಸಕರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com