ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಇಂದು ಬೆಳಗ್ಗೆ ಹುಬ್ಬಳ್ಳಿ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಬಸ್​ ಚಾಲಕನ​ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.
Bagalkot: Two Killed in bus accident near Bilagi
ಖಾಸಗಿ ಬಸ್ ಪಲ್ಟಿ
Updated on

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್ ಬಳಿ ಬುಧವಾರ ಭೀಕರ ಅಪಘಾತ ಸಂಭವಿಸಿದ್ದು, ಮಹಾರಾಷ್ಟ್ರ ಮೂಲದ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ಮಹಾರಾಷ್ಟ್ರದ ನೋಂದಣಿ ಹೊಂದಿರುವ ಖಾಸಗಿ ಸ್ಲೀಪರ್ ಬಸ್‌ವೊಂದು ಹುಬ್ಬಳ್ಳಿ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಬಸ್​ ಚಾಲಕನ​ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದ ವೇಳೆ ಬಸ್‌ನಲ್ಲಿ ಸುಮಾರು 15ರಿಂದ 20 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಬೈಕ್ ಸವಾರ ಮತ್ತು ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Bagalkot: Two Killed in bus accident near Bilagi
ಬಳ್ಳಾರಿಯಲ್ಲಿ ಭೀಕರ ಅಪಘಾತ: ಪಾದಾಚಾರಿಗಳ ಮೇಲೆ ಹರಿದು ಮೈನಿಂಗ್‌ ಲಾರಿ ಪಲ್ಟಿ; ಇಬ್ಬರು ದುರ್ಮರಣ

ಘಟನಾ ಸ್ಥಳಕ್ಕೆ ಬೀಳಗಿ ಪೊಲೋಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com