ಬೆಂಗಳೂರು ಉತ್ತರ ಕ್ಲಾರೆನ್ಸ್ ಹೈಸ್ಕೂಲ್‌ನಲ್ಲಿ 215 ವಿದ್ಯಾರ್ಥಿಗಳ ಮೇಲೆ ನಿಗಾ; ಪತ್ತೆಯಾಗದ ಹೊಸ H1N1 ಪ್ರಕರಣ

ಬೆಂಗಳೂರು ಉತ್ತರ ನಗರ ನಿಗಮದ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರ ನಿರ್ದೇಶನದಂತೆ, ನ್ಯೂ ಬಗಲೂರು ಲೇಔಟ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ತಂಡ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಹಾಜರಾತಿ ಮತ್ತು ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿತು.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಿಚರ್ಡ್ಸ್ ಟೌನ್‌ನ ಕ್ಲಾರೆನ್ಸ್ ಹೈಸ್ಕೂಲ್‌ನಲ್ಲಿ ಇತ್ತೀಚೆಗೆ ಫ್ಲೂ ಸೋಂಕು ಕಾಣಿಸಿಕೊಂಡಿರುವ ಕುರಿತು ವರದಿಗಳ ಹಿನ್ನೆಲೆಯಲ್ಲಿ, ಬೆಂಗಳೂರು ಉತ್ತರ ನಗರ ನಿಗಮದ (BNCC) ಸಾರ್ವಜನಿಕ ಆರೋಗ್ಯ ಇಲಾಖೆ ಶಾಲೆಯಲ್ಲಿ ಸಕ್ರಿಯ ಆರೋಗ್ಯ ನಿಗಾ ಕಾರ್ಯವನ್ನು ಮುಂದುವರಿಸಿದೆ.

ಬೆಂಗಳೂರು ಉತ್ತರ ನಗರ ನಿಗಮದ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರ ನಿರ್ದೇಶನದಂತೆ, ನ್ಯೂ ಬಗಲೂರು ಲೇಔಟ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ತಂಡ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಹಾಜರಾತಿ ಮತ್ತು ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿತು.

Representational image
7000 ಕಾಲೇಜು ವಿದ್ಯಾರ್ಥಿಗಳಿಗೆ HIV- ವರದಿ ಸುಳ್ಳು: ನ್ಯಾಕೋ ಸಂಸ್ಥೆ ಮಾಹಿತಿ ಒಪ್ಪಲ್ಲ; ರಾಜ್ಯದಲ್ಲಿ ಸೋಂಕು ನಿಯಂತ್ರಣದಲ್ಲಿದೆ; ಯು.ಟಿ. ಖಾದರ್‌

ವಿವಿಧ ತರಗತಿಗಳ 215 ವಿದ್ಯಾರ್ಥಿಗಳಲ್ಲಿ ಫ್ಲೂಗೆ ಸಂಬಂಧಿಸಿದ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಆರೋಗ್ಯ ಇಲಾಖೆಯ ತಂಡ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಯಾವುದೇ ಹೊಸ H1N1 ಪ್ರಕರಣಗಳು ಪತ್ತೆಯಾಗಿಲ್ಲ. ವಿದ್ಯಾರ್ಥಿಗಳಲ್ಲಿ ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಲಕ್ಷಣಗಳ ಕುರಿತು ನಿರಂತರ ನಿಗಾ ವಹಿಸಲಾಗುತ್ತಿದೆ.

ವಿದ್ಯಾರ್ಥಿಗಳಲ್ಲಿ ಜ್ವರ, ಉಸಿರಾಟಕ್ಕೆ ಸಂಬಂಧಿಸಿದ ಲಕ್ಷಣಗಳು ಅಥವಾ ಇತರ ಅನಾರೋಗ್ಯದ ಲಕ್ಷಣಗಳು ಕಂಡುಬಂದರೆ, ಅಂತಹ ವಿದ್ಯಾರ್ಥಿಗಳ ಕುರಿತು ಆರೋಗ್ಯ ಇಲಾಖೆಗೆ ಪ್ರತಿದಿನ ಮಾಹಿತಿ ನೀಡುವಂತೆ ಶಾಲಾ ಆಡಳಿತಕ್ಕೆ ಸೂಚಿಸಲಾಗಿದೆ.

ಪ್ರಕರಣಗಳಲ್ಲಿ ಅಸಹಜ ಹೆಚ್ಚಳ ಅಥವಾ ಒಂದೇ ಪ್ರದೇಶದಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬರುವುದನ್ನು ತ್ವರಿತವಾಗಿ ಗುರುತಿಸಿ, ಅಗತ್ಯ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ ನಿರಂತರ ನಿಗಾ ವಹಿಸುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com