KPSC ಕರ್ಮಕಾಂಡ: ನಾಪತ್ತೆಯಾಗಿರುವ IAS ಅಧಿಕಾರಿಗೆ ED ಬಿಗ್ ಶಾಕ್; ಜ್ಞಾನೇಂದ್ರ ಕುಮಾರ್ ಮನೆ ಮೇಲೆ ದಾಳಿ

ಈ ಹಿಂದೆ ಕೆಪಿಎಸ್ ಸಿ ಮೇಲೂ ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದ ಇಡಿ ಅಧಿಕಾರಿಗಳು ಇಂದು, ಜಯಮಹಲ್ ರಸ್ತೆಯಲ್ಲಿರುವ ಗ್ಯಾನೇಂದ್ರ ಕುಮಾರ್ ಅವರ ಮನೆಯ ಬಾಗಿಲು ಒಡೆದು ದಾಳಿ ನಡೆಸಿದ್ದಾರೆ.
ED Raids IAS Officer Gyanendra Kumar's House In Bengaluru
ಗ್ಯಾನೇಂದ್ರ ಕುಮಾರ್
Updated on

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED), ಸದ್ಯ ಯಾರ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರ ಬೆಂಗಳೂರಿನ ನಿವಾಸದ ಮೇಲೆ ಭಾನುವಾರ ದಾಳಿ ನಡೆಸಿದೆ.

ಈ ಹಿಂದೆ ಕೆಪಿಎಸ್ ಸಿ ಮೇಲೂ ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದ ಇಡಿ ಅಧಿಕಾರಿಗಳು ಇಂದು, ಜಯಮಹಲ್ ರಸ್ತೆಯಲ್ಲಿರುವ ಗ್ಯಾನೇಂದ್ರ ಕುಮಾರ್ ಅವರ ಮನೆಯ ಬಾಗಿಲು ಒಡೆದು ದಾಳಿ ನಡೆಸಿದ್ದಾರೆ.

ಇಡಿ ಅಧಿಕಾರಿಗಳು, ಗ್ಯಾನೇಂದ್ರ ಕುಮಾರ್ ಅವರ ನಿರಂತರ ಸಂಪರ್ಕಕ್ಕೆ ಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಅವರ ಮನೆ ಮೇಲೆ ದಾಳಿ ನಡೆಸಿ, ತೀವ್ರ ಶೋಧ ನಡೆಸಿದ್ದಾರೆ.

ED Raids IAS Officer Gyanendra Kumar's House In Bengaluru
KPSC ಕರ್ಮಕಾಂಡ: ಅತ್ತ ED ದಾಳಿ, ಇತ್ತ IAS ಅಧಿಕಾರಿ ನಿಗೂಢ ಕಣ್ಮರೆ! ವಿಚಾರಣೆಗೆ ಹೆದರಿ ನಾಪತ್ತೆಯಾದ್ರಾ ಜ್ಞಾನೇಂದ್ರ?

ಜ್ಞಾನೇಂದ್ರ ಕುಮಾರ್ ಅವರು KPSCಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕೆಲಸ ಮಾಡಿದ್ದರು. ಪಶುವೈದ್ಯಾಧಿಕಾರಿ ಪರೀಕ್ಷೆ, KAS ಪರೀಕ್ಷೆಯನ್ನು ಕೂಡ ಅವರು ನಡೆಸಿದ್ದರು. KAS ಪರೀಕ್ಷೆ ಅಕ್ರಮ ಆರೋಪದ ಮೇಲೆ ಶಾಂತ ಹೊಸಮನಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇಡಿ ಅಧಿಕಾರಿಗಳು ಶಾಂತ ಹೊಸಮನಿ ಅವರ ಮನೆ ಮೇಲೆ ದಾಳಿ ನಡೆಸಿತ್ತು. ಇದೀಗ ಜ್ಞಾನೇಂದ್ರ ಕುಮಾರ್ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಕಳೆದ ಗುರುವಾರ ತಾರತುರಿಯಲ್ಲಿ ಏರ್ ಟಿಕೆಟ್ ಬುಕ್ ಮಾಡಿದ್ದ ಐಎಎಸ್ ಅಧಿಕಾರಿ, ಆಗಸ್ಟ್ 20 ರಂದು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ನಾಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ. ಐಎಎಸ್ ಐಧಿಕಾರಿ ಜ್ಞಾನೇಂದ್ರ ಕುಮಾರ್ ಜೊತೆ ನಾನೇ ಖುದ್ದು ಮಾತನಾಡಿದ್ದೇನೆ. ಅವರು ನಾಪತ್ತೆಯಾಗಿಲ್ಲ. ಅವರ ತಂದೆಗೆ ಅನಾರೋಗ್ಯವಾಗಿದ್ದರಿಂದ ಅವರು ತಮ್ಮ ಊರಾದ ಉತ್ತರಪ್ರದೇಶಕ್ಕೆ ಹೋಗಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಯಂತೆ ಅವರು ನಾಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com