Bengaluru Tunnel Road: ಸ್ವತಃ ಅಖಾಡಕ್ಕಿಳಿದ ಗೌತಮ್ ಅದಾನಿ; CM ಡಿಕೆಶಿ ನಿವಾಸಕ್ಕೆ ದಿಢೀರ್ ಭೇಟಿ – ಸುರಂಗ ರಸ್ತೆ ಕುರಿತು ಮಹತ್ವದ ಚರ್ಚೆ

ಬೆಂಗಳೂರು ಸುರಂಗ ರಸ್ತೆ ಯೋಜನೆಗೆ ಅತಿ ಕಡಿಮೆ ಬಿಡ್ ಸಲ್ಲಿಸಿದ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಅವರು ಭಾನುವಾರ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ, ಯೋಜನೆ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
Gautam Adani meets Karnataka CM DK Shivakumar in Bengaluru
ಗೌತಮ್ ಅದಾನಿ; CM ಡಿಕೆಶಿ ನಿವಾಸಕ್ಕೆ ದಿಢೀರ್ ಭೇಟಿ
Updated on

ಬೆಂಗಳೂರು: ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷೆಯ 'ಬೆಂಗಳೂರು ಸುರಂಗ ರಸ್ತೆ' (Bengaluru Tunnel Road Project) ಯೋಜನೆ ಈಗ ಹೊಸ ತಿರುವು ಪಡೆದುಕೊಂಡಿದೆ.

ಬೆಂಗಳೂರು ಸುರಂಗ ರಸ್ತೆ ಯೋಜನೆಗೆ ಅತಿ ಕಡಿಮೆ ಬಿಡ್ ಸಲ್ಲಿಸಿದ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಅವರು ಭಾನುವಾರ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ, ಯೋಜನೆ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಗೌತಮ್ ಅದಾನಿ, ಸಿಎಂ ಜೊತೆ ಕೆಲ ಹೊತ್ತು ಚರ್ಚೆ ನಡೆಸಿದ್ದಾರೆ.

Gautam Adani meets Karnataka CM DK Shivakumar in Bengaluru
ಬೆಂಗಳೂರು: ಸುರಂಗ ರಸ್ತೆ, ಮೆಖ್ರಿ ಕಾರಿಡಾರ್ ಯೋಜನೆಗಳಿಗೆ ಕಾನೂನು ತೊಡಕು; BMLTA ನಿಯಮವೇ ಅಡ್ಡಿ..?

ಮುಖ್ಯಮಂತ್ರಿ ಕಚೇರಿ (CMO) ಮತ್ತು ಅದಾನಿ ಗ್ರೂಪ್ ಈವರೆಗೆ ಸಭೆಯ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಸಭೆಯ ನಂತರ ಶಿವಕುಮಾರ್ ಅವರು ಅದಾನಿಯನ್ನು ಬೀಳ್ಕೊಡುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಅತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅದಾನಿ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಎಂದು ಟೀಕೆ ಮಾಡುತ್ತಿದ್ದರೆ, ಇತ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಗೌತಮ್ ಅದಾನಿಯನ್ನು ಭೇಟಿಯಾಗಿರುವುದು ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ.

ಉದ್ಯಮಿ ಗೌತಮ್ ಅದಾನಿ ಅವರು ಆರ್ಟ್ ಆಫ್ ಲಿವಿಂಗ್​​ಗೆ ಆಗಮಿಸಿದ್ದರು. ಆರ್ಟ್ ಆಫ್ ಲಿವಿಂಗ್ ಗೆ ಭೇಟಿ ಬಳಿಕ ಅದಾನಿ ಅವರು ಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿ, ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿರುವುದು ರಾಜಕೀಯವಾಗಿ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ಹೈ ಕಮಾಂಡ್ ಅದಾನಿ ವಿರುದ್ಧ ನಿರಂತರ ರಾಜಕೀಯ ಟೀಕೆ, ವಾಗ್ದಾಳಿ ನಡೆಸುತ್ತಿದ್ದರೆ, ಇತ್ತ ಕರ್ನಾಟಕ ಸಿಎಂ ಅದಾನಿಯನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಉದ್ಯಮಿ ಅದಾನಿ ಅವರು ಬೆಂಗಳೂರಿನ ಉದ್ದೇಶಿತ ಸುರಂಗ ಮಾರ್ಗ ಯೋಜನೆ ಬಗ್ಗೆ ಸಿಎಂ ಶಿವಕುಮಾರ್ ಜತೆ ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ನಡುವೆ ಸುಮಾರು 17 ಕಿ.ಮೀ. ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದರ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಸಂಸ್ಥೆಯು 22,267 ಕೋಟಿ ರೂ. ಮೊತ್ತವನ್ನು ನಮೂದಿಸಿ ಅತಿ ಕಡಿಮೆ ಬಿಡ್ ಸಲ್ಲಿಸಿದ ಸಂಸ್ಥೆಯಾಗಿ ಹೊರಹೊಮ್ಮಿದೆ. ಈ ಸಂಬಂಧ ಚರ್ಚೆ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ‌.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com