ಚಾಮರಾಜನಗರ ಅರಣ್ಯದಲ್ಲಿ ಗುಂಡಿನ ದಾಳಿ: ಸಿಬಿಐ ತನಿಖೆಗೆ BJP ಆಗ್ರಹ

ಬಿಜೆಪಿಯ ಸತ್ಯಶೋಧನಾ ಸಮಿತಿ ನಡೆಸಿದ ಪರಿಶೀಲನೆಯಲ್ಲಿ ಹಲವು ಅಂಶಗಳು ಅನುಮಾನ ಮೂಡಿಸಿವೆ. ಮೃತಪಟ್ಟ ಮೂವರಿಗೂ ಅತಿ ಸಮೀಪದಿಂದ ಗುಂಡು ಹಾರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.
BJP protest
ಬಿಜೆಪಿ ನಾಯಕರ ಪ್ರತಿಭಟನೆ
Updated on

ಆಗಸ್ಟ್ 15ರಂದು ಚಾಮರಾಜನಗರದಲ್ಲಿ ನಡೆದ ಅರಣ್ಯ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನೀಡಿರುವ ಅಧಿಕೃತ ವಿವರಣೆಯಲ್ಲಿ ‘ಗಂಭೀರ ವ್ಯತ್ಯಾಸಗಳು’ ಕಂಡುಬಂದಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿಯ ಸತ್ಯಶೋಧನಾ ಸಮಿತಿ ನಡೆಸಿದ ಪರಿಶೀಲನೆಯಲ್ಲಿ ಹಲವು ಅಂಶಗಳು ಅನುಮಾನ ಮೂಡಿಸಿವೆ. ಮೃತಪಟ್ಟ ಮೂವರಿಗೂ ಅತಿ ಸಮೀಪದಿಂದ ಗುಂಡು ಹಾರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದ್ದು, ಸಾರ್ವಜನಿಕವಾಗಿ ಮರಣೋತ್ತರ ಪರೀಕ್ಷೆಯ ವರದಿಗಳನ್ನು ಬಿಡುಗಡೆ ಮಾಡದಿರುವ ಬಗ್ಗೆಯೂ ಪ್ರಶ್ನಿಸಿದೆ.

BJP protest
ಚಾಮರಾಜನಗರ: ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ; ಮೂವರು ಸಾವು

ಪ್ರಕರಣದ ಪ್ರಮುಖ ಸಾಕ್ಷಿ ಎಂದು ಹೇಳಲಾಗಿರುವ ಮಹಿಮಾ ದಾಸ್ ನಾಪತ್ತೆಯಾಗಿದ್ದಾರೆ. ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ. ಪ್ರಕರಣದ ಸತ್ಯಾಂಶವನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿರುವ ವಿಜಯೇಂದ್ರ, ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರ ವಾಸ್ತವಾಂಶಗಳನ್ನು ಮುಚ್ಚಿಡುತ್ತಿದೆ ಎಂದು ಆರೋಪಿಸಿ ಅರಣ್ಯ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com