ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ 141ನೇ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
In a major setback for Karnataka, CWRC recommends to release of 9000 cusecs cauvery water daily to Tamil Nadu
ಕೆಆರ್ ಎಸ್
Updated on: 

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ತೀವ್ರ ಹಿನ್ನಡೆಯಾಗಿದ್ದು, ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಸೋಮವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ 141ನೇ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಆದೇಶದಿಂದಾಗಿ ಕರ್ನಾಟಕವು ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ 12 ಸಾವಿರ ಬದಲಿಗೆ ಈಗ 9 ಸಾವಿರ ಕ್ಯೂಸೆಕ್‌ ನೀರು ಹರಿಸಬೇಕಾಗಿದೆ.

ಮೊದಲ ಬಾರಿಗೆ ಮೂರು ಸಾವಿರ ಕ್ಯೂಸೆಕ್‌ ನೀರು ಬಿಡಲು ಕರ್ನಾಟಕಕ್ಕೆ ಆದೇಶಿಸಲಾಗಿತ್ತು. ಎರಡನೇ ಬಾರಿಗೆ 12 ಸಾವಿರ, ಈಗ ಮೂರನೇ ಬಾರಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು ಸೂಚಿಸಲಾಗಿದೆ.

In a major setback for Karnataka, CWRC recommends to release of 9000 cusecs cauvery water daily to Tamil Nadu
ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್ 31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಇನ್ನು ಸಿಡಬ್ಲ್ಯೂಆರ್‌ಸಿಯ ಈ ಆದೇಶದ ಕುರಿತು ನಾಳೆ ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ(CWMA) ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com