ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

ಈದ್ ಮೆರವಣಿಗೆ ವೇಳೆ 100ಕ್ಕೂ ಹೆಚ್ಚು ಮುಸ್ಲಿಂ ಪುಂಡರು ರಾಷ್ಟ್ರ ರಕ್ಷಣಾ ಪಡೆ ಸ್ಥಾಪಕ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
Puneeth Kerehalli
ಪುನೀತ್ ಕೆರೆಹಳ್ಳಿ
Updated on

ಬೆಂಗಳೂರು: ಈದ್ ಮೆರವಣಿಗೆ ವೇಳೆ 100ಕ್ಕೂ ಹೆಚ್ಚು ಮುಸ್ಲಿಂ ಪುಂಡರು ರಾಷ್ಟ್ರ ರಕ್ಷಣಾ ಪಡೆ ಸ್ಥಾಪಕ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಚೇರಿ ಬಳಿ ಗೂಂಡಾ ವರ್ತನೆ ಮಾಡಿದ್ದಲ್ಲದೇ ಹಿಂದೂ ಕಾರ್ಯಕರ್ತ ಮುರುಳಿ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಸರ್ ತಾನ್ ಸೆ ಜುದಾ ಪುನೀತ್ ಕೆರೆಹಳ್ಳಿ ಎಂದು ಘೋಷಣೆಗಳನ್ನು ಕೂಗಿದ್ದಾರೆ.

ಇಷ್ಟಕ್ಕೆ ಸುಮ್ಮನಾಗದ ಕಿಡಿಗೇಡಿಗಳು ಬಸವನಗುಡಿ ಪೊಲೀಸ್ ಇನ್ಸ್ಪೆಕ್ಟರ್ ಜೊತೆ ವಿಕ್ಟೋರಿಯಾ ಆಸ್ಪತ್ರೆಗೆ ಪುನೀತ್ ಕೆರೆಹಳ್ಳಿ, ತೇಜಸ್ ಗೌಡ, ನಿತಿನ್ ಅರಸು ತೆರಳುವ ವೇಳೆ ಪೊಲೀಸ್ ವಾಹನವನ್ನು ಹಿಂಬಾಲಿಸಿ ಅಲ್ಲಾ ಅಕ್ಬರ್ ಘೋಷಣೆಗಳನ್ನು ಕೂಗಿದ್ದಾರೆ.

Puneeth Kerehalli
ಈದ್ ಮಿಲಾದ್: ಚಿಕ್ಕಮಗಳೂರಿನ ಟಿಪ್ಪುನಗರದಲ್ಲಿ ಐ ಲವ್ ಮೊಹಮ್ಮದ್ ಬ್ಯಾನರ್, ಕಾರವಾರದಲ್ಲಿ ಪ್ಯಾಲೆಸ್ತೀನ್ ಬಾವುಟ ಪ್ರದರ್ಶನ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com