ಸಂಚಾರ ನಿಯಮ ಉಲ್ಲಂಘನೆ: ಹೆಲ್ಮೆಟ್ ಇಲ್ಲದೆ ಬುಲೆಟ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಬಿತ್ತು 500 ರೂ.ದಂಡ..!

ಸರ್ಕಾರಿ ಪ್ರೌಢಶಾಲೆಗಳಿಗೆ ಕಂಪ್ಯೂಟರ್‌ ಲ್ಯಾಬ್‌ಗಳ ವಿತರಣೆ ಅಂಗವಾಗಿ ‘ಶೀ ಫಾರ್ ಸೊಸೈಟಿ’ ಆಯೋಜಿಸಿದ್ದ ಬೈಕ್‌ ರ‍್ಯಾಲಿಯಲ್ಲಿ ಶಾಸಕ ಪ್ರಕಾಶ್ ಕೋಳಿವಾಡ ಅವರು ಹೆಲ್ಮೆಟ್‌ ಧರಿಸದೆ ಬೈಕ್‌ ಚಲಾಯಿಸಿದ್ದರು.
Ranebennur MLA Prakash Koliwad
ಶಾಸಕ ಪ್ರಕಾಶ್ ಕೋಳಿವಾಡ
Updated on

ಹಾವೇರಿ: ಸಾಮಾನ್ಯ ಜನರಾಗಲಿ, ಜನಪ್ರತಿನಿಧಿಗಳೇ ಆಗಲಿ ‘ನಿಯಮ ಎಲ್ಲರಿಗೂ ಒಂದೇ’ ಎಂಬುದನ್ನು ಹಾವೇರಿ ಪೊಲೀಸರು ಮತ್ತೊಮ್ಮೆ ತೋರಿಸಿದ್ದಾರೆ.

ಹೆಲ್ಮೆಟ್‌ ಧರಿಸದೆ ಬೈಕ್‌ ರ‍್ಯಾಲಿಯಲ್ಲಿ ಭಾಗವಹಿಸಿದ್ದ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಅವರಿಗೆ ನೋಟಿಸ್‌ ಜಾರಿ ಮಾಡಿ, ರೂ. 500 ದಂಡ ವಿಧಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಗೆ ವ್ಯಾಪಕ ಟೀಕೆ ವ್ಯಕ್ತವಾದ ಬಳಿಕ ಪೊಲೀಸರು ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದು, ತಮ್ಮ ತಪ್ಪನ್ನು ಒಪ್ಪಿಕೊಂಡ ಪ್ರಕಾಶ್ ಕೋಳಿವಾಡ ದಂಡ ಪಾವತಿಸಿದ್ದಾರೆ.

ಸರ್ಕಾರಿ ಪ್ರೌಢಶಾಲೆಗಳಿಗೆ ಕಂಪ್ಯೂಟರ್‌ ಲ್ಯಾಬ್‌ಗಳ ವಿತರಣೆ ಅಂಗವಾಗಿ ‘ಶೀ ಫಾರ್ ಸೊಸೈಟಿ’ ಆಯೋಜಿಸಿದ್ದ ಬೈಕ್‌ ರ‍್ಯಾಲಿಯಲ್ಲಿ ಶಾಸಕ ಪ್ರಕಾಶ್ ಕೋಳಿವಾಡ ಅವರು ಹೆಲ್ಮೆಟ್‌ ಧರಿಸದೆ ಬೈಕ್‌ ಚಲಾಯಿಸಿದ್ದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿತ್ತು.

ಹಾವೇರಿ ಜಿಲ್ಲಾ ಪೊಲೀಸರು ಈಗಾಗಲೇ ಸಿಸಿಟಿವಿ ಹಾಗೂ ಸಂಚಾರ ಸಿಗ್ನಲ್‌ ಕ್ಯಾಮೆರಾಗಳ ಮೂಲಕ ಹೆಲ್ಮೆಟ್‌ ಧರಿಸದ ವಾಹನ ಸವಾರರಿಗೆ ದಂಡ ವಿಧಿಸುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ನೇತೃತ್ವದ ಬೈಕ್‌ ರ‍್ಯಾಲಿಯ ದೃಶ್ಯಗಳು ವೈರಲ್‌ ಆದ ಬಳಿಕ ಪೊಲೀಸರು ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದರು.

Ranebennur MLA Prakash Koliwad
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ 50% ದಂಡ ರಿಯಾಯಿತಿ: ವಿಶೇಷ ಕೌಂಟರ್‌ ಸ್ಥಾಪನೆ BTP ಮುಂದು

ಹಲವು ಬಾರಿ ರಾಜಕೀಯ ನಾಯಕರು ಬೈಕ್‌ ರ‍್ಯಾಲಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ವೇಳೆ ಸಂಚಾರ ನಿಯಮಗಳನ್ನು ನಿರ್ಲಕ್ಷಿಸುತ್ತಾರೆ.

ಜಾಗೃತ ನೆಟ್ಟಿಗರು ಇಂತಹ ಘಟನೆಗಳನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ನಿಯಮಗಳು ಎಲ್ಲರಿಗೂ ಒಂದೇ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಪ್ರಕಾಶ್ ಕೋಳಿವಾಡ, “ಪೊಲೀಸ್ ಇಲಾಖೆ ನನಗೆ ನೋಟಿಸ್ ನೀಡಿದೆ. ನಾನು ಅದನ್ನು ಗೌರವಿಸುತ್ತೇನೆ. ನಾನು ತಪ್ಪು ಮಾಡಿದ್ದೇನೆ ಮತ್ತು ಅದನ್ನು ಒಪ್ಪಿಕೊಂಡಿದ್ದೇನೆ. ಪೊಲೀಸರು ವಿಧಿಸಿದ ದಂಡವನ್ನೂ ಪಾವತಿಸಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com