ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ!

ಇಂದು ಮಧ್ಯಾಹ್ನ ದೆಹಲಿಯಿಂದ ಆಗಮಿಸಿದ ಬಳಿಕ ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ನಾಗೇಂದ್ರ, ಮನುವಾದಿಗಳ ಕುತಂತ್ರದಿಂದ ನಾನು ಮೂರು ತಿಂಗಳು ಜೈಲಿಗೆ ಹೋಗಿದ್ದೆ ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
Valmiki Scam: B Nagendra Resigns as minister
ನಾಗೇಂದ್ರ
Updated on

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರು ಶುಕ್ರವಾರ ಸಂಜೆ ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸದನದ ಒಳಗೆ ಮತ್ತು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಸಿದ್ದ ಬಿಜೆಪಿ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

ಇಂದು ಮಧ್ಯಾಹ್ನ ದೆಹಲಿಯಿಂದ ಆಗಮಿಸಿದ ಬಳಿಕ ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ನಾಗೇಂದ್ರ, ಮನುವಾದಿಗಳ ಕುತಂತ್ರದಿಂದ ನಾನು ಮೂರು ತಿಂಗಳು ಜೈಲಿಗೆ ಹೋಗಿದ್ದೆ ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಪ್ರತಿಪಕ್ಷ ಬಿಜೆಪಿ ಸದನ ನಡೆಯೋಕೆ ಬಿಡಲಿಲ್ಲ. ಸದನವನ್ನು ಹಾಳು ಮಾಡಿದರು. ಸಂವಿಧಾನ ವಿರೋಧಿ ಈಗಲೂ ಮನುಸ್ಮೃತಿ ಜಾರಿಗೆ ಪ್ರಯತ್ನಿಸುತ್ತಿವೆ. ಇದು ವೇದ ಕಾಲ ಅಲ್ಲ. ಪುರಾಣ ಕಾಲ ಅಲ್ಲ. ಸಂವಿಧಾನ ಕಾಲ, ಅಂಬೇಡ್ಕರ್ ಯುಗ ಇದು. ಉತ್ತರಕಾಂಡದಲ್ಲಿ ಶಂಭುಕ ಹತ್ಯೆಯಾಯ್ತು. ಇವತ್ತು ಶಂಭುಕ ಹತ್ಯೆ ಆಗಲ್ಲ. ರಕ್ಷಣೆಗೆ ಸಂವಿಧಾನ ಇದೆ. ಮನುಸ್ಮೃತಿಗಳು ಶಂಭುಕ ಹತ್ಯೆ ಮಾಡಿದ ರೀತಿ ಆಗಲ್ಲ. ದಲಿತರು, ಕ್ಷುದ್ರರು, ಆದಿವಾಸಿಗಳು, ಅಲ್ಪಸಂಖ್ಯಾತರು ಬದುಕಬಾರದು ಅನ್ನೋದು ಮನುಸ್ಮೃತಿ ಬಿಜೆಪಿ ಅವರ ಮನಸ್ಥಿತಿ. ಆದರೆ, ಸಂವಿಧಾನ ನಮ್ಮ ರಕ್ಷಣೆ ಮಾಡುತ್ತದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

Valmiki Scam: B Nagendra Resigns as minister
ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಶಿವಕುಮಾರ್

ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಾಗೇಂದ್ರ ರಾಜೀನಾಮೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರ ಜೊತೆ ಮಹತ್ವದ ಸಮಾಲೋಚನೆ ನಡೆಸಿದ್ದರು. ಅಲ್ಲದೆ ಪಕ್ಷ ಹಾಗೂ ಸರ್ಕಾರದ ಹಿತದೃಷ್ಟಿಯಿಂದ ನಾಗೇಂದ್ರ ಅವರು ರಾಜೀನಾಮೆ ನೀಡುವುದೇ ಸೂಕ್ತ ಎಂಬ ಸಂದೇಶವನ್ನು ನೀಡಿದ್ದರು ಎನ್ನಲಾಗಿದೆ.

ಒಂದೇ ಹಗರಣಕ್ಕೆ ಎರಡು ಬಾರಿ ರಾಜೀನಾಮೆ

ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಬಿ ನಾಗೇಂದ್ರ ಅವರು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಜೂನ್ 6, 2024ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಸಿಎಂ ಡಿಕೆ ಶಿವಕುಮಾರ್​ ಅವರ ಸಚಿವ ಸಂಪುಟದಲ್ಲಿ ಮತ್ತೆ ಸಚಿವರಾಗಿ ಆಗಸ್ಟ್ 3, 2026ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಇದಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು ಮತ್ತು ನಾಗೇಂದ್ರ ರಾಜೀನಾಮೆ ಪಟ್ಟು ಹಿಡಿದಿದ್ದವು. ಹೀಗಾಗಿ ನಾಗೇಂದ್ರ ಅವರು ಇಂದು ರಾಜೀನಾಮೆ ನೀಡಿದ್ದಾರೆ. ಆ ಮೂಲಕ ಒಂದೇ ಹಗರಣ ಸಂಬಂಧ ಎರಡು ಬಾರಿ ಸಚಿವ ಸ್ಥಾನ ಕಳೆದುಕೊಂಡಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com