

ಚಿಕ್ಕಮಗಳೂರು: ಚಿಕ್ಕಮಗಳೂರಿನ MES ಇಂಟರ್‌ನ್ಯಾಷನಲ್ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ವಿರುದ್ಧ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಸಂಬಂಧ ಹಿಂದೂ ಕಾರ್ಯಕರ್ತರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಶಾಲೆಯ ಪ್ರಿನ್ಸಿಪಾಲ್ ನೀಡಿದ್ದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ.
ಈದ್ ಮಿಲಾದ್ ಆಚರಣೆ ಸಂಬಂಧ ವಿದ್ಯಾರ್ಥಿಗಳಿಗೆ ನಿರ್ದಿಷ್ಟ ಡ್ರೆಸ್ ಕೋಡ್ ನಲ್ಲಿ ಬರುವಂತೆ ಆಡಳಿತ ಮಂಡಳಿ ಮೆಸೇಜ್ ಕಳುಹಿಸಿದ್ದಾರೆ. ಇನ್ನು ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡುವುದಕ್ಕೆ ಹಿಂದೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಅಲ್ಲದೆ ಶಾಲೆಗೆ ನುಗ್ಗಿದ ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದೀಗ ಹಿಂದೂ ಕಾರ್ಯಕರ್ತರಾದ ಕೋಟೆ ಪ್ರಸಾದ್, ಬೆಣ್ಣೆ ಕೃಷ್ಣ, ಶಿವಣ್ಣ, ದಿಲೀಪ್ ಶೆಟ್ಟಿ, ಸುನಿಲ್, ರಾಜೇಗೌಡ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.