

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇದು ಖುದ್ಧು ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಎರಡೂಕಡೆ ವಾದ ಆಲಿಸಿದ ನ್ಯಾಯಾಲಯವು ತಲಾ 10 ಸಾವಿರ ವೈಯಕ್ತಿಕ ಶ್ಯೂರಿಟಿ ನೀಡುವಂತೆ ಸೂಚಿಸಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
2025ರ ಆಗಸ್ಟ್ 14ರಂದು ಪ್ರಿಯಾಂಕ್ ಖರ್ಗೆ ತಮ್ಮ ‘X’ ಖಾತೆಯಲ್ಲಿ RSS ಸದಸ್ಯರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಇದೇ ವೇಳೆ, ನಲಪಾಡ್ ಅವರು ಯೂಟ್ಯೂಬ್ ಚಾನೆಲ್‌ವೊಂದರ ಸಂದರ್ಶನದಲ್ಲಿ ಆರ್‌ಎಸ್‌ಎಸ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇಬ್ಬರ ವಿರುದ್ಧ ಬೆಂಗಳೂರಿನ ಸಿದ್ದಾಪುರದ RSS ಕಾರ್ಯಕರ್ತ ಎ ತೇಜಸ್ ದೂರು ದಾಖಲಿಸಿದ್ದರು.