ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್: 7ನೇ ಮಹಡಿಯಿಂದ ಜಿಗಿದ ಟೆಕ್ಕಿಗಳು; ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಕೋ ಲಿವಿಂಗ್ ಪಿಜಿಯೊಂದರ 7ನೇ ಮಹಡಿಯಿಂದ ಪ್ರೇಮಿಗಳಿಬ್ಬರು ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ ಯುವಕನ ಸ್ಥಿತಿ ಗಂಭೀರವಾಗಿದೆ.
representation purpose only
ಸಂಗ್ರಹ ಚಿತ್ರ
Updated on

ಬೆಂಗಳೂರು: ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಕೋ ಲಿವಿಂಗ್ ಪಿಜಿಯೊಂದರ 7ನೇ ಮಹಡಿಯಿಂದ ಪ್ರೇಮಿಗಳಿಬ್ಬರು ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ ಯುವಕನ ಸ್ಥಿತಿ ಗಂಭೀರವಾಗಿದೆ. ಮೃತ ಯುವತಿಯನ್ನು ಪುದುಚೆರಿ ಮೂಲದ ಜನನಿ ಎಂದು ಗುರುತಿಸಲಾಗಿದೆ. ಮಾಣಿಕ್ಯ ವೇಲು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಫ್ಟ್ ವೇರ್ ಇಂಜಿನಿಯರ್ ಗಳಾಗಿದ್ದು ಜನನಿ ಹಾಗೂ ಮಾಣಿಕ್ಯ ವೇಲು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ತಾವು ವಾಸವಾಗಿದ್ದ ಪಿಜಿ ಕಟ್ಟಡದ 7ನೇ ಮಹಡಿಯಿಂದ ಜಿಗಿದು ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯಾವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದರೂ ಎಂಬುದು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

representation purpose only
ಇಸ್ಲಾಂ ಶ್ರೇಷ್ಠ ಧರ್ಮ, ಮಠ-ಮಂದಿರ ಬದಲಿಗೆ ಹಜ್ ಯಾತ್ರೆಗೆ ಹೋಗೋ ಆಸೆಯಿದೆ: ಬಸವರಾಜ ರಾಯರೆಡ್ಡಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com