ಸರ್ಕಾರಿ ಶಾಲೆಗಳಲ್ಲಿ ಶೂ, ಸಾಕ್ಸ್ ವಿತರಣೆ ವಿಳಂಬ; ಸರ್ಕಾರದ ವಿರುದ್ಧ AIDSO ಆಕ್ರೋಶ

ಪ್ರತಿವರ್ಷ ಸುಮಾರು 1.4 ಕೋಟಿ ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸಿ ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುತ್ತಾರೆ, ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ವಾರ್ಷಿಕವಾಗಿ ಸುಮಾರು 8 ಲಕ್ಷ ಉದ್ಯೋಗಗಳನ್ನು ಮಾತ್ರ ಸೃಷ್ಟಿಸುತ್ತಿವೆ.
Ajay Kamath
ಅಜಯ್ ಕಾಮತ್
Updated on

ಬೆಂಗಳೂರು: ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಕಳೆದರೂ ಕರ್ನಾಟಕದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಿಸದಿರುವುದು ವಿದ್ಯಾರ್ಥಿ ಸಂಘಟನೆಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಕುರಿತು ಸರ್ಕಾರದ ಆದ್ಯತೆಗಳನ್ನು ಪ್ರಶ್ನಿಸಿರುವ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (ಎಐಡಿಎಸ್‌ಒ) ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸುವಂತೆ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ನಡೆದ ಸಂಘಟನೆಯ ಜಿಲ್ಲಾ ಮಟ್ಟದ ವಿದ್ಯಾರ್ಥಿ ಶಿಬಿರದಲ್ಲಿ ಮಾತನಾಡಿದ ಕಾಮತ್, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಲ್ಲಿ ಸರ್ಕಾರದ ಆದ್ಯತೆಗಳೇನು ಎಂದು ಪ್ರಶ್ನಿಸಿದರು.

ಇದೇ ವೇಳೆ, ಹಲವು ಪ್ರಮುಖ ಸರ್ಕಾರಿ ಶಾಲೆಗಳಲ್ಲಿ ರಾಗಿ ಗಂಜಿ ವಿತರಿಸುವುದನ್ನೂ ನಿಲ್ಲಿಸಲಾಗಿದೆ ಎಂದು ಅವರು ಆರೋಪಿಸಿದರು.

Ajay Kamath
ADDSO ಪಟ್ಟಿಯಲ್ಲಿ 1.10 ಕೋಟಿಗೂ ಹೆಚ್ಚು ಮತದಾರರು; ದಾಖಲೆಗಳನ್ನು ಸರಿಪಡಿಸಲು 15 ದಿನ ಹೆಚ್ಚಿನ ಕಾಲಾವಕಾಶ ನೀಡಿ: ಬಿ.ಕೆ ಹರಿಪ್ರಸಾದ್

ಸಕ್ಕರೆ ಬೆಲೆ ಏರಿಕೆಯನ್ನು ಇದಕ್ಕೆ ಕಾರಣವೆಂದು ಹೇಳಲಾಗುತ್ತಿದೆ ಎಂದು ತಿಳಿಸಿದ ಅವರು, ಹಣಕಾಸಿನ ಸಮಸ್ಯೆಗಳ ನೆಪದಲ್ಲಿ ಶಾಲಾ ಮಕ್ಕಳ ಪೌಷ್ಟಿಕ ಆಹಾರಕ್ಕೆ ಕಡಿವಾಣ ಹಾಕುವುದು ಸರಿಯೇ ಎಂದು ಪ್ರಶ್ನಿಸಿದರು.

ಇದೇ ವೇಳೆ ವಿದ್ಯಾರ್ಥಿಗಳಿಗೆ ಕಲ್ಯಾಣ ಯೋಜನೆಗಳ ಪ್ರಯೋಜನಗಳು ವಿಳಂಬವಿಲ್ಲದೆ ತಲುಪುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುವ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಲಭ್ಯವಿರುವ ಉದ್ಯೋಗಾವಕಾಶಗಳ ನಡುವಿನ ಅಂತರ ಹೆಚ್ಚುತ್ತಿರುವ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು.

ಪ್ರತಿವರ್ಷ ಸುಮಾರು 1.4 ಕೋಟಿ ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸಿ ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುತ್ತಾರೆ, ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ವಾರ್ಷಿಕವಾಗಿ ಸುಮಾರು 8 ಲಕ್ಷ ಉದ್ಯೋಗಗಳನ್ನು ಮಾತ್ರ ಸೃಷ್ಟಿಸುತ್ತಿವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com