

ಬೆಂಗಳೂರು: ಬೆಂಗಳೂರಿನಲ್ಲಿ ಸಾವಿರಾರು ಕೋಟಿ ರೂ. ಸಾಮ್ರಾಜ್ಯ ಕಟ್ಟಿದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿಜೆ ರಾಯ್ ಅವರು ಭಾನುವಾರ ತಮ್ಮಿಚ್ಛೆಯಂತೆ ಕಾಸಾಗ್ರ್ಯಾಂಡ್‌ನ ಮಣ್ಣಲ್ಲಿ ಮಣ್ಣಾಗಿದ್ದಾರೆ.
ಇಂದು ಸಂಜೆ ಬನ್ನೇರುಘಟ್ಟದಲ್ಲಿರುವ ಕಾಸಾಗ್ರಾಂಡ್‌ನಲ್ಲಿ ಕ್ರಿಶ್ಚಿಯನ್ ಧರ್ಮದ ವಿಧಿ-ವಿಧಾನದಂತೆ ಅಂತ್ಯಸಂಸ್ಕಾರ ನೆರವೇರಿತು.
ಅಂತ್ಯಕ್ರಿಯೆಗೆ ಮುನ್ನ ಬನ್ನೇರುಘಟ್ಟದಲ್ಲಿರುವ ಕಾಸಾಗ್ರಾಂಡ್‌ನಲ್ಲಿ ಮಧ್ಯಾಹ್ನ ಎರಡು ಗಂಟೆಯವರೆಗೂ ರಾಯ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಇರಿಸಲಾಗುತ್ತಿದೆ. ಅಂತಿಮ ಗೌರವ ಸಲ್ಲಿಸಲು ಸಂಬಂಧಿಕರು, ಆಪ್ತರು ಹಾಗೂ ಅಭಿಮಾನಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಿಂದ ತೀವ್ರ ನೊಂದಿದ್ದ ಸಿಜೆ ರಾವ್ ಅವರು ಕಳೆದ ಶುಕ್ರವಾರ ಹೊಸೂರು ರಸ್ತೆಯ ಲ್ಯಾಂಗ್ ಫರ್ಡ್ ಟೌನ್ ನಲ್ಲಿರುವ ಕಾನ್ಫಿಡೆಂಟ್ ಗ್ರೂಪ್ ಕಂಪನಿ ಕಚೇರಿಯಲ್ಲಿ ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.
ದೇಶದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ಸಿಜೆ ರಾಯ್ ಅವರ ಮನೆ, ಕಚೇರಿಗಳ ಮೇಲೆ ಈ ಹಿಂದೆ ಹಲವು ಬಾರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಅದರಂತೆ ಇಂದು ಸಹ ಅವರ ಕಂಪನಿಯ ಮೇಲೆ ಐಟಿ ದಾಳಿ ನಡೆದಿದ್ದು, ಇದರಿಂದ ಮನನೊಂದು ತಮ್ಮ ಪಿಸ್ತೂಲ್ನಿಂದಲೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಈ ಘಟನೆ ನಡೆದಿತ್ತು.
Advertisement