ಬಾಗಲಕೋಟೆ: ಪುಟ್ಟ ಪುಟ್ಟ ಮೂರು ಮಕ್ಕಳನ್ನು ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳನ್ನು ನೇಣು ಬಿಗಿದು ಕೊಂದು ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಬಾಗಲಕೋಟೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ.
ಪೊಲೀಸರ ಪರಿಶೀಲನೆ
ಪೊಲೀಸರ ಪರಿಶೀಲನೆ
Updated on: 

ಬಾಗಲಕೋಟೆ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳನ್ನು ನೇಣು ಬಿಗಿದು ಕೊಂದು ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಬಾಗಲಕೋಟೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ. ರೂಪಾ ಎಂಬಾಕೆ ಸಮೃದ್ಧಿ(5), ಪ್ರೀತಮ್(4), ಸುಕ್ಷಿತ್(2) ಮೂರು ಮಕ್ಕಳನ್ನು ನೇಣಿಗೆ ಹಾಕಿ ಕೊಂದು ಬಳಿಕ ತಾನೂ ಡೀಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಡೀಸೆಲ್ ಕುಡಿದು ಅಸ್ವಸ್ಥಗೊಂಡಿರುವ ರೂಪಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 2018ರಲ್ಲಿ ಹನುಮಂತ ಬಾದಾಮಿ ಜೊತೆ ರೂಪ ಮದುವೆಯಾಗಿದ್ದರು. ದಂಪತಿಗೆ ಮೂವರು ಮಕ್ಕಳಾಗಿದ್ದರು. ಆದರೆ ಅತ್ತೆಯ ಕಿರುಕುಳದಿಂದ ಬೇಸತ್ತು ರೂಪಾ ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಳು. ಘಟನಾ ಸ್ಥಳಕ್ಕೆ ಬಾದಾಮಿ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ ಪರಿಶೀಲನೆ
ಬೆಂಗಳೂರು: ಬಾಡಿಗೆ ಮನೆಯಲ್ಲಿ ನಾಲ್ವರು ವಲಸೆ ಕಾರ್ಮಿಕರು ಶವವಾಗಿ ಪತ್ತೆ; ಉಸಿರುಗಟ್ಟಿ ಸಾವಿಗೀಡಾಗಿರುವ ಶಂಕೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com