ದೊಡ್ಡಬಳ್ಳಾಪುರ: ಶನಿಮಹಾತ್ಮ ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಮುಸ್ಲಿಂ ಯುವಕನಿಂದ ಗಲಾಟೆ, Video Viral

ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಯುವಕನೋರ್ವ ಹಿಂದೂಗಳ ಮೇಲೆ ಗಲಾಟೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮುಸ್ಲಿಂ ಯುವಕನಿಂದ ಕಿರಿಕ್
ಮುಸ್ಲಿಂ ಯುವಕನಿಂದ ಕಿರಿಕ್
Updated on

ದೊಡ್ಡಬಳ್ಳಾಪುರ: ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಯುವಕನೋರ್ವ ಹಿಂದೂಗಳ ಮೇಲೆ ಗಲಾಟೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿರುವ ಶನಿಮಹಾತ್ಮ ದೇವಸ್ಥಾನದಲ್ಲಿ ಬೆಳಗ್ಗೆ ಸುಪ್ರಭಾತ ಹಾಡು ಹಾಕಲಾಗಿತ್ತು. ಇದಕ್ಕೆ ಮುಸ್ಲಿಂ ಯುವಕನೋರ್ವ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮನೆಯಲ್ಲಿ ತಾಯಿ ಮಲಗಿದ್ದಾಳೆ ಸೌಂಡ್ ಕಡಿಮೆ ಮಾಡಿ, ಇಲ್ಲವೆ ಆಫ್ ಮಾಡಿ ಎಂದು ಧಮ್ಕಿ ಹಾಕಿದ್ದಾನೆ. ಇದಕ್ಕೆ ಆಕ್ರೋಶಗೊಂಡು ಹಿಂದೂಗಳು ಮಸೀದಿಯಲ್ಲಿ ಅಜಾನ್ ಕೂಗಿದರೆ ನಾವು ಹೀಗೆ ಕೇಳುತ್ತೀವಾ ಎಂದು ಪ್ರಶ್ನಿಸಿದರು.

ಇದೇ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ ಯುವಕರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ನಂತರ ದೇವಸ್ಥಾನದ ಪೂಜಾರಿ ನೀಡಿದ ದೂರಿನನ್ವಯ ದೊಡ್ಡಬಳ್ಳಾಪುರ ನಗರ ಪೊಲೀಸರು NCR ದಾಖಲಿಸಿದ್ದು ಎರಡು ಕಡೆಯವರಿಗೆ ಬುದ್ದಿ ಹೇಳಿ ಕಳುಹಿಸಿದ್ದಾರೆ.

ಮುಸ್ಲಿಂ ಯುವಕನಿಂದ ಕಿರಿಕ್
ರಾಜ್ಯದಲ್ಲಿ ಆಡಳಿತ ಕೋಮಾ ಸ್ಥಿತಿಗೆ ಹೋಗಿದೆ: ಸಿದ್ದು ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com