ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ- ಪ್ರಿಯಾಂಕ್ ಖರ್ಗೆ

ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
 Priyank Kharge
ಪ್ರಿಯಾಂಕ್ ಖರ್ಗೆ
Updated on

ಬೆಂಗಳೂರು: ಇದೇ ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆ ಗೆ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ್ ಅವರು ರಾಜ್ಯ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅವಧಿಯು ಮುಕ್ತಾಯಗೊಳ್ಳುತ್ತಿರುವುದರಿಂದ ಮುಂದಿನ ಚುನಾವಣೆ ನಡೆಸುವವರೆಗೂ ಆಡಳಿತಾಧಿಕಾರಿಯನ್ನು ನೇಮಿಸುವ ಬದಲು ಈಗಿರುವ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಬೇಕೆಂದು ತಿಳಿಸಿದರು.

ಇದಕ್ಕೆ ಉತ್ತರಿಸಿದ ಸಚಿವರು, ಚುನಾವಣೆ ನಡೆಸುವುದು ತುಂಬಾ ತಡವಾಗುವುದಾದರೆ ಮಾತ್ರ ಕಾನೂನಿನಡಿ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಲು ಅವಕಾಶವಿರುತ್ತದೆ ಎಂದರು.

 Priyank Kharge
ಜಿದ್ದಿಗೆ ಬಿದ್ದ ಸಿದ್ದು-ಡಿಕೆಶಿ: ಕಾಂಗ್ರೆಸ್ ನಾಯಕರಲ್ಲಿ ಮೂಡದ ಒಮ್ಮತ; ಅಪೆಕ್ಸ್ ಬ್ಯಾಂಕ್ ಚುನಾವಣೆ ಮುಂದೂಡಿಕೆ!

ಆದರೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ. ಚುನಾವಣೆಯನ್ನು ಸರ್ಕಾರ ಆದಷ್ಟು ಬೇಗ ನಡೆಸಲಿದೆ. ಆದಾಗ್ಯೂ ಚುನಾವಣೆ ನಡೆಸುವುದು ತಡವಾದಲ್ಲಿ ಸದಸ್ಯರ ಮನವಿ ಕುರಿತು ಕಾನೂನಿನಡಿ ಪರಿಶೀಲಿಸಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com