
ವಿರೋಧ ಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಮತ್ತು ಯುಪಿಎ ಕಾಲದ ಮನರೇಗಾವನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ನಿರ್ಣಯ ಮಂಡಿಸಿದರು. ಈ ವೇಳೆ ಮಾತನಾಡಿದ ಅವರು, ಕರ್ನಾಟಕದ ಗ್ರಾಮೀಣ ಜನರ ಬದುಕುವ ಹಕ್ಕನ್ನು ರಕ್ಷಿಸುವ ದೃಷ್ಟಿಯಿಂದ, ಈ ಸದನವು ಕೇಂದ್ರ ಸರ್ಕಾರವನ್ನು ತಕ್ಷಣವೇ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತದೆ ಎಂದರು. ವಿಬಿ-ಜಿ ರಾಮ್ ಜಿ ಕಾಯ್ದೆ ಫೆಡರಲ್ ತತ್ವಕ್ಕೆ ವಿರುದ್ಧವಾಗಿದೆ. ರಾಜ್ಯ ಖಜಾನೆಗೆ ತೀವ್ರ ಹೊರೆಯಾಗಿದೆ. ಗ್ರಾಮ ಪಂಚಾಯತ್‌ಗಳ ಅಧಿಕಾರ, ಹಕ್ಕುಗಳನ್ನು ಕಸಿದುಕೊಂಡಿದೆ. ಹೀಗಾಗಿ ಈ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಸಿಎಂ ಆಗ್ರಹಿಸಿದರು. ಇನ್ನು ಸದನವೂ ಕೇಂದ್ರ ಸರ್ಕಾರದ ಈ ಕ್ರಮವನ್ನು ತೀವ್ರವಾಗಿ ವಿರೋಧಿಸುತ್ತದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಂತೆ ಮಧ್ಯಪ್ರವೇಶಿಸಿದ ವಿಪಕ್ಷ ನಾಯಕ ಆರ್. ಅಶೋಕ್, ಇದು ಸದನದ ನಿರ್ಣಯವಲ್ಲ, ಕಾಂಗ್ರೆಸ್ ನ ನಿರ್ಣಯ ಎಂದು ಹೇಳುವಂತೆ ಒತ್ತಾಯಿಸಿದರು.
ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ವೇಳೆ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ಘಟನೆ ನಡೆದಿದೆ. ಜ್ಯೋತಿಷಿ ಕಮಲಾಕರ್ ಭಟ್ ಜೊತೆ ಸುಚಿತ್ರ ಎಂಬಾಕೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದ ಸುಚಿತ್ರ ಪುತ್ರಿ ತನ್ನ ತಂದೆ ಮಹೇಶ್ ನಾಯ್ಕ್ ಗೆ ಹೇಳಿದ್ದಾಳೆ. ಹೀಗಾಗಿ ಮಹೇಶ್ ನಾಯ್ಕ್ ಸಿದ್ದಾಪುರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಇದರಿಂದ ಕೆರಳಿದ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಮತ್ತು ಸಹಚರರು ಮಹೇಶ್ ನಾಯ್ಕ್, ವಸಂತ್ ನಾಯ್ಕ ಮತ್ತು ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇನ್ನು ಗಂಭೀರ ಗಾಯಗೊಂಡಿದ್ದ ವಸಂತ್ ನಾಯ್ಕರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲಾಕರ್ ಭಟ್, ಪ್ರೇಯಸಿ ಸುಚಿತ್ರಾ. ಲೋಕನಾತ್ ಸೇರಿದಂತೆ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್ ಸದಸ್ಯ ನಸೀರ್ ಅಹ್ಮದ್ ಪ್ರಧಾನಿ ನರೇಂದ್ರ ಮೋದಿಯನ್ನು ದೇಶದ್ರೋಹಿ ಎಂದು ಕರೆದಿದ್ದ ವಿಚಾರ ವಿಧಾನಪರಿಷತ್‌ನಲ್ಲಿಂದು ಬಾರಿ ಗದ್ದಲ ಕೋಲಾಹಲಕ್ಕೆ ಸಾಕ್ಷಿಯಾಯಿತು. ನಸೀರ್ ಅಹಮದ್ ಕ್ಷಮೆ ಕೇಳುವಂತೆ ಆಗ್ರಹಿಸಿ ಪ್ರತಿಪಕ್ಷಗಳ ಸದಸ್ಯರು ನಿನ್ನೆ ರಾತ್ರಿಯಿಂದ ಮೇಲ್ಮನೆಯಲ್ಲಿ ಧರಣಿ ನಡೆಸುತ್ತಿದ್ದರು. ಇಂದು ಸಹ ವಿಪಕ್ಷಗಳು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದರು. ಮೋದಿ ಬಗ್ಗೆ ಅಸಂಸದೀಯ ಪದ ಬಳಕೆ ಮಾಡಿರುವ ನಸೀರ್ ಅಹಮದ್ ಅವರಿಂದ ಕ್ಷಮೆ ಕೇಳಿಸಿ ಇಲ್ಲವೇ ಹೊರಹಾಕಿ ಎಂದು ಆಗ್ರಹಿಸಿದರು. ಬಿಜೆಪಿ ಜೆಡಿಎಸ್ ಸದಸ್ಯರು ಬಿಗಿ ಪಟ್ಟು ಹಿಡಿದ ಹಿನ್ನಲೆಯಲ್ಲಿ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಕೂಡ ನಜೀರ್ ಅಹ್ಮದ್ ಬೇಷರತ್ ಕ್ಷಮೆಯಾಚಿಸುವಂತೆ ಸೂಚಿಸಿದ್ದರಿಂ ನಸೀರ್ ಅಹ್ಮದ್ ಒತ್ತಡಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಐತಿಹಾಸಿಕ ಕರಗ ನಡೆಯುವ ದೇವಾಲಯವಾದ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಹುಂಡಿಯಲ್ಲಿದ್ದ 122 ಗ್ರಾಂ ಚಿನ್ನದ ನೆಕ್ಲೆಸ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಜರಾಯಿ ಇಲಾಖೆ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೆ ನಾಗರಾಜು ನನ್ನು ಅಮಾನತು ಮಾಡಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮರಾಯ ದತ್ತಿ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. 2025ರ ಜುಲೈ 9ರಿಂದ ಕೆ.ನಾಗರಾಜು ಕೆಲಸ ನಿರ್ವಹಿಸುತ್ತಿದ್ದರು. ಇವರ ವ್ಯಾಪ್ತಿಗೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯವೂ ಒಳಪಡುತ್ತದೆ. ದೇವಾಲಯಕ್ಕೆ ಭಕ್ತರು ಹರಕೆಯ ರೂಪದಲ್ಲಿ ನೀಡಿದ್ದ ಚಿನ್ನದ ನೆಕ್ಲೆಸ್ ಕಳುವಾಗಿತ್ತು. ಕೆಲ ದಿನಗಳ ಬಳಿಕ ಹುಂಡಿಯಲ್ಲಿ ಚಿನ್ನದ ಸರ ಪತ್ತೆಯಾಗಿತ್ತಾದರೂ, ಅದು ಮೂಲ ನೆಕ್ಲೆಸ್ ಗಿಂತ ಭಿನ್ನವಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿಯ ಕರಗ ಸಮಿತಿಯ ಅಧ್ಯಕ್ಷ ಸತೀಶ್ ಗಂಭೀರ ಆರೋಪ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸದ್ಯ ಕೆ ನಾಗರಾಜು ರನ್ನು ದತ್ತಿ ಇಲಾಖೆ ಅಮಾನ
Advertisement