ವಿಬಿ-ಜಿ ರಾಮ್ ಜಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸಭೆಯಲ್ಲಿ ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ನಿರ್ಣಯ ಮಂಡಿಸಿದ್ದರು.
Karnataka Assembly passes resolution urging Centre to immediately repeal VB-G RAM G and reinstate MGNREGA amid BJP's walkout
ಸಿದ್ದರಾಮಯ್ಯ
Updated on

ಬೆಂಗಳೂರು: ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಮತ್ತು ಯುಪಿಎ ಯುಗದ ಮನರೇಗಾವನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರ ಬುಧವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸಭೆಯಲ್ಲಿ ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ನಿರ್ಣಯ ಮಂಡಿಸಿದ್ದರು.

"ಕರ್ನಾಟಕದ ಗ್ರಾಮೀಣ ಜನರ ಬದುಕುವ ಹಕ್ಕನ್ನು ರಕ್ಷಿಸುವ ದೃಷ್ಟಿಯಿಂದ, ಈ ಸದನವು ಕೇಂದ್ರ ಸರ್ಕಾರವನ್ನು ತಕ್ಷಣವೇ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್(ಗ್ರಾಮೀಣ) (ವಿಬಿ-ಗ್ರಾಮ್-ಜಿ) ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತದೆ ಎಂದು ಸಿಎಂ ಹೇಳಿದ್ದರು.

Karnataka Assembly passes resolution urging Centre to immediately repeal VB-G RAM G and reinstate MGNREGA amid BJP's walkout
ವಿಬಿ-ಜಿ ರಾಮ್ ಜಿ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ವಿಬಿ-ಜಿ ರಾಮ್‌ ಜಿ ಕಾಯ್ದೆ ಫೆಡರಲ್ ತತ್ವಕ್ಕೆ ವಿರುದ್ಧವಾಗಿದೆ. ರಾಜ್ಯ ಖಜಾನೆಗೆ ತೀವ್ರ ಹೊರೆಯಾಗಿದೆ ಮತ್ತು ವಿಕೇಂದ್ರೀಕರಣದ ತತ್ವಕ್ಕೆ ವಿರುದ್ಧವಾಗಿದೆ. ಗ್ರಾಮ ಪಂಚಾಯತ್‌ಗಳ ಅಧಿಕಾರ ಮತ್ತು ಹಕ್ಕುಗಳನ್ನು ಕಸಿದುಕೊಂಡಿದೆ. ಹೀಗಾಗಿ ಈ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಸಿಎಂ ಆಗ್ರಹಿಸಿದರು.

ಇಂದು ಸಹ ವಿಧಾನಸಭೆಯಲ್ಲಿ ನಿರ್ಣಯದ ಮೇಲೆ ಚರ್ಚೆ ಮುಂದುವರೆಯಿತು. ಆದರೆ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು.

ಆಡಳಿತಾರೂಢ ಕಾಂಗ್ರೆಸ್ ಮಂಡಿಸಿದ ನಿರ್ಣಯವನ್ನು ಬಿಜೆಪಿ ವಿರೋಧಿಸುತ್ತದೆ ಮತ್ತು ವಿಬಿ-ಜಿ ರಾಮ್ ಜಿ ಅನ್ನು ಬೆಂಬಲಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು.

ಅಬಕಾರಿ ಇಲಾಖೆಯಲ್ಲಿ 6,000 ಕೋಟಿ ರೂ.ಗಳಷ್ಟು ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿರುವುದರಿಂದ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ರಾಜೀನಾಮೆ ನೀಡಬೇಕು ಎಂಬ ತಮ್ಮ ಪಕ್ಷದ ಬೇಡಿಕೆಯನ್ನು ಅವರು ಪುನರುಚ್ಚರಿಸಿದರು.

ಸಚಿವ ತಿಮ್ಮಾಪುರ ರಾಜೀನಾಮೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ವಿಧಾನಸಭೆಯೊಳಗೆ ಮಂಗಳವಾರ ಅಹೋರಾತ್ರಿ ಧರಣಿ ನಡೆಸಿತ್ತು ಮತ್ತು ಅದು ಬುಧವಾರವೂ ಮುಂದುವರೆಯಿತು.

ಪ್ರತಿಪಕ್ಷ ಸದಸ್ಯರ ಅನುಪಸ್ಥಿತಿಯಲ್ಲೇ ವಿಬಿ-ಜಿ ರಾಮ್ ಜಿ ವಿರುದ್ಧದ ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ಅವರು ಹೇಳಿದರು. ಅಲ್ಲದೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com