ಬೆಳಗಾವಿ hit-and-run case: ಮೂವರು ಯುವಕರ ದಾರುಣ ಸಾವು

ಮೂವರು ಮುಗಳಖೋಡ್ ನಿಂದ ಹಾರೂಗೇರಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ, ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ.
Accident
ಅಪಘಾತ
Updated on: 

ಬೆಳಗಾವಿ: ಹಾರೂಗೇರಿ ಪಟ್ಟಣದ ಅಥಣಿ-ಗೋಕಾಕ ರಸ್ತೆ ಮೇಲೆ ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೋಡೆದ ಪರಿಣಾಮ ಬೈಕ್ ಮೇಲೆ ಸಂಚರಿಸುತ್ತಿದ್ದ ಮೂವರು ಯುವಕರು ದಾರುಣ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ಮೃತರನ್ನು ಗಜಾನನ ಮಹಾದೇವ ವಡೆಯರ್(22), ಮಾಳಪ್ಪ ಮಲ್ಲಪ್ಪ ಗೋಲಭಾಂವಿ(22) ಮತ್ತು ಮಹಾದೇವ ಮಲ್ಲಪ್ಪ ಗೋಲಭಾಂವಿ (26) ಎಂದು ಗುರುತಿಸಲಾಗಿದೆ.

ಮೂವರು ಮುಗಳಖೋಡ್ ನಿಂದ ಹಾರೂಗೇರಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ, ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ಡಿಕ್ಕಿಯ ಪರಿಣಾಮ ಗಜಾನನ್ ಮತ್ತು ಮಹಾದೇವ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಮಾಳಪ್ಪ ತಲೆಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸಾಗುವ ವೇಳೆ ಮೃತಪಟ್ಟಿದ್ದರು.

Accident
ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು, 15 ಮಂದಿ ಗಾಯ

ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಸರ್ಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು.

ಘಟನೆ ಸಂಬಂಧ ಹಾರೂಗೇರಿ ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 281 ಮತ್ತು 106(1) ಮತ್ತು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 134 ಮತ್ತು 187 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com