Bengaluru-Pune ಹೈ–ಸ್ಪೀಡ್ ರೈಲು ಮಾರ್ಗಕ್ಕೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ

Minister Pralhad Joshi with Railway Minister Ashwini Vaishnan
ರೈಲ್ವೆ ಸಚಿವ ಅಶ್ವಿನಿ ವೈಷ್ಣನ್‌ ಅವರೊಂದಿಗೆ ಸಚಿವ ಪ್ರಲ್ಲಾದ್ ಜೋಶಿ
Updated on

ಹುಬ್ಬಳ್ಳಿ/ಬೆಂಗಳೂರು: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್‌ನಲ್ಲಿ ದೇಶದಲ್ಲಿ ಒಟ್ಟು 7 ಹೈ ಸ್ಪೀಡ್ ರೈಲು ಕಾರಿಡಾರ್ ಘೋಷಿಸಿರುವ ಕೇಂದ್ರ ಸರ್ಕಾರದಿಂದ ಇದೀಗ ಕರ್ನಾಟಕಕ್ಕೆ ಮತ್ತೊಂದು ಹೈಸ್ಪೀಡ್ ರೈಲು ಕಾರಿಡಾರ್ ಕೊಡುಗೆಯ ಶುಭ ಸೂಚನೆ ಸಿಕ್ಕಿದೆ.

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಲಾದ್ ಜೋಶಿ ಅವರ ಒತ್ತಾಸೆ ಮೇರೆಗೆ ಕರ್ನಾಟಕದಲ್ಲಿ 'ಬೆಂಗಳೂರು ಮತ್ತು ಪುಣೆ' ನಡುವೆ ಮತ್ತೊಂದುಹೈ ಸ್ಪೀಡ್ ರೈಲು ಕಾರಿಡಾರ್ ಗೆ ಚಿಂತನೆ ನಡೆದಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣನ್‌ ಅವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಬೆಂಗಳೂರು ಮತ್ತು ಪುಣೆ ನಡುವೆ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕಾಗಿ ಬುಧವಾರ ವೈಷ್ಣವ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ರೈಲ್ವೆ ಸಚಿವರು ಸಕಾರಾತ್ಮಕ ವಾಗಿ ಸ್ಪಂದಿಸಿದ್ದಾರೆ ಎಂದು ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಪ್ರಲ್ಹಾದ್ ಜೋಷಿ ತಿಳಿಸಿದ್ದಾರೆ.

ಈ ರೈಲು ಕಾರಿಡಾರ್ ನಿರ್ಮಾಣದಿಂದ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟ ಕಕ್ಕೆ ಹೆಚ್ಚಿನ ಪ್ರಯೋಜನ ಆಗಲಿದೆ. ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿತ್ರ ದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಅನುಕೂಲವಾಗುತ್ತದೆ ಎಂದು ವೈಷ್ಣವ್‌ಗೆ ಮನವರಿಕೆ ಮಾಡಿಕೊಟ್ಟರು.

ಬುಧವಾರ ಇಬ್ಬರೂ ಸಚಿವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ ಬೆಂಗಳೂರು–ಪುಣೆ ಹೈ–ಸ್ಪೀಡ್ ರೈಲು ಕಾರಿಡಾರ್ ಅಗತ್ಯತೆಯನ್ನು ವಿವರಿಸಿದ್ದಾರೆ.

Minister Pralhad Joshi with Railway Minister Ashwini Vaishnan
ಪ್ರಹ್ಲಾದ್ ಜೋಶಿ ಮೊದಲು ಚುನಾವಣಾ ಬಾಂಡ್‌, PM ಕೇರ್ಸ್‌ ಬಗ್ಗೆ ಉತ್ತರಿಸಲಿ: ದಿನೇಶ್ ಗುಂಡೂರಾವ್

ಇತ್ತೀಚಿನ ಕೇಂದ್ರ ಬಜೆಟ್‌ನಲ್ಲಿ ಹಲವು ಪ್ರಮುಖ ರೈಲು ಮಾರ್ಗಗಳಿಗೆ ಒತ್ತು ನೀಡಲಾಗಿದೆ. ಆದರೆ ಮಧ್ಯ ಹಾಗೂ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವಿಶೇಷವಾಗಿ ಬೆಂಗಳೂರು–ಪುಣೆ ಕಾರಿಡಾರ್ ಅಗತ್ಯವಿದೆ ಎಂದು ಪ್ರಲ್ಹಾದ್ ಜೋಷಿ ಒತ್ತಿ ಹೇಳಿದ್ದಾರೆ.

ಈ ಪ್ರಸ್ತಾವಿತ ಹೈ–ಸ್ಪೀಡ್ ರೈಲು ಮಾರ್ಗವು ಕರ್ನಾಟಕ ಮತ್ತು ಮಹಾರಾಷ್ಟ್ರದ ತಂತ್ರಜ್ಞಾನ ಕೇಂದ್ರಗಳಾದ ಬೆಂಗಳೂರು ಹಾಗೂ ಪುಣೆ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದೆ. ಯೋಜನೆಯಿಂದ ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಸೇರಿದಂತೆ ಹಲವಾರು ಜಿಲ್ಲೆಗಳಿಗೆ ದೊಡ್ಡ ಮಟ್ಟದ ಲಾಭವಾಗಲಿದೆ ಎಂದು ಅವರು ಹೇಳಿದ್ದಾರೆ.

ವ್ಯಾಪಾರ, ಶಿಕ್ಷಣ ಹಾಗೂ ಲಾಜಿಸ್ಟಿಕ್ಸ್ ಕ್ಷೇತ್ರಗಳಿಗೆ ವೇಗದ ಸಂಚಾರ ಸೌಲಭ್ಯ ಒದಗಿಸುವ ಮೂಲಕ ಈ ಕಾರಿಡಾರ್ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ. ಇದರಿಂದ ಕೇವಲ ಮಹಾನಗರಗಳಷ್ಟೇ ಅಲ್ಲದೆ, ರಾಜ್ಯದ ಉತ್ತರ ಭಾಗದ ಜಿಲ್ಲೆಗಳ ಆರ್ಥಿಕ ಸಾಮರ್ಥ್ಯವನ್ನು ತೆರೆದಿಡುವ ಮಹತ್ವದ ಯೋಜನೆಯಾಗಲಿದೆ ಎಂದು ಜೋಷಿ ಅಭಿಪ್ರಾಯಪಟ್ಟಿದ್ದಾರೆ. ಈ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬೆಳವಣಿಗೆ ಯೋಜನೆಯನ್ನು ಅಧಿಕೃತಗೊಳಿಸುವತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಜೋಷಿ ತಿಳಿಸಿದ್ದಾರೆ.

ಇದೇ ವೇಳೆ, ಎಚ್.ಡಿ.ಕುಮಾರಸ್ವಾಮಿ ಅವರ ಕಚೇರಿಯಿಂದ ಬಿಡುಗಡೆಯಾದ ಪ್ರಕಟಣೆಯಲ್ಲಿ ಬೆಂಗಳೂರು–ಮುಂಬೈ ನಡುವೆ ಹೊಸ ರೈಲು ಸೇವೆಯನ್ನು ಆರಂಭಿಸುವುದಾಗಿ ಕೂಡ ತಿಳಿಸಲಾಗಿದೆ. ಇದು ಕರ್ನಾಟಕ–ಮಹಾರಾಷ್ಟ್ರ ನಡುವಿನ ಸಂಪರ್ಕವನ್ನು ಇನ್ನಷ್ಟು ಬಲಪಡಿಸುವ ನಿರೀಕ್ಷೆ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com