ಹರಿಪ್ರಸಾದ್ ಅವರೇ, ನಾವಿಬ್ಬರೂ ಒಟ್ಟಿಗೆ ಶಿಕ್ಷಣ ಪಡೆದಿದ್ದೆವು, ಇಂದು ಅದನ್ನು ನೆನಪಿಸಿಕೊಳ್ಳಲು ನನಗೆ ಬೇಸರವಾಗುತ್ತಿದೆ: ಸುರೇಶ್ ಕುಮಾರ್

ಕಮಲಾಕರ ಭಟ್ ಅವರನ್ನು ಸುರೇಶ್ ಕುಮಾರ್ ಅವರಿಗೆ ಚೆನ್ನಾಗಿ ಪರಿಚಯವಿದೆ, ಒರ್ವ ಶಾಸಕನಾಗಿ ಪ್ರೋತ್ಸಾಹಿಸಿ ಬೆಳೆಸಿದ್ದು ಸಂವಿಧಾನಕ್ಕೆ ಮಾಡುವ ಅಪಚಾರವಲ್ಲವೇ? ಎಂದು ಶಾಸಕ ಸುರೇಶ್ ಕುಮಾರ್ ವಿರುದ್ಧ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದರು.
B K Hariprasad, Karunakara Bhat and Suresh kumar (File photo)
ಬಿ ಕೆ ಹರಿಪ್ರಸಾದ್, ಕರುಣಾಕರ ಭಟ್ ಮತ್ತು ಸುರೇಶ್ ಕುಮಾರ್ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಜ್ಯೋತಿಷಿ ಕಮಲಾಕರ್ ಭಟ್ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದು, ಅದರಿಂದ ಒಂದು ಹತ್ಯೆಯೇ ನಡೆದುಹೋಯಿತು ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಬಿಜೆಪಿ ಹಿರಿಯ ನಾಯಕ ಸುರೇಶ್ ಕುಮಾರ್ ವಿರುದ್ಧ ಮಾಡಿರುವ ಆರೋಪಕ್ಕೆ ಸೋಷಿಯಲ್ ಮೀಡಿಯಾ ಮೂಲಕ ತಕ್ಕ ಉತ್ತರ ನೀಡಿದ್ದಾರೆ.

ಕಮಲಾಕರ ಭಟ್ ಅವರನ್ನು ಸುರೇಶ್ ಕುಮಾರ್ ಅವರಿಗೆ ಚೆನ್ನಾಗಿ ಪರಿಚಯವಿದೆ, ಒರ್ವ ಶಾಸಕನಾಗಿ ಪ್ರೋತ್ಸಾಹಿಸಿ ಬೆಳೆಸಿದ್ದು ಸಂವಿಧಾನಕ್ಕೆ ಮಾಡುವ ಅಪಚಾರವಲ್ಲವೇ? ಎಂದು ಶಾಸಕ ಸುರೇಶ್ ಕುಮಾರ್ ವಿರುದ್ಧ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಸುರೇಶ್ ಕುಮಾರ್, ಕಾರವಾರದ ಸಿದ್ದಾಪುರದಲ್ಲಿ ನಡೆದ ಹೇಯ ಕೃತ್ಯವೊಂದನ್ನು ಮುಂದಿಟ್ಟುಕೊಂಡು, ಅದಕ್ಕೆ ರಾಜಕೀಯ ಬಣ್ಣ ಬಳಿದು, ನನ್ನ ಹೆಸರನ್ನು ತಳುಕು ಹಾಕಲು ನೀವು ನಡೆಸಿರುವ ಪ್ರಯತ್ನ ನಿಮ್ಮ "ಬೌದ್ಧಿಕ ದಿವಾಳಿತನ"ವನ್ನು ಎತ್ತಿ ತೋರಿಸುವಂತಿದೆ.​

ಒಬ್ಬ ವ್ಯಕ್ತಿ ಮಾಡಿದ ಅಪರಾಧಕ್ಕೆ, ಆತನ ಪರಿಚಯವಿದ್ದ ಜನಪ್ರತಿನಿಧಿಯೇ "ನೈತಿಕ ಹೊಣೆ" ಹೊರಬೇಕು ಎಂಬ ನಿಮ್ಮ ವಾದ ಬಾಲಿಶವಾದದ್ದು. ಸಾರ್ವಜನಿಕ ಜೀವನದಲ್ಲಿರುವ ನಾವು ಸಾವಿರಾರು ಜನರನ್ನು ಭೇಟಿಯಾಗುತ್ತೇವೆ.

ಯಾರೋ ಒಬ್ಬರು ನನ್ನ ಜೊತೆ ಫೋಟೋ ತೆಗೆಸಿಕೊಂಡರು ಅಥವಾ ಪರಿಚಯಸ್ಥರಾಗಿದ್ದರು ಎಂಬ ಒಂದೇ ಕಾರಣಕ್ಕೆ, ಅವರ ಖಾಸಗಿ ಬದುಕಿನ ವಿಕೃತಿಗಳಿಗೆ ಅಥವಾ ಅವರು ಎಸಗುವ ಕ್ರಿಮಿನಲ್ ಕೃತ್ಯಗಳಿಗೆ ನಾನು ಉತ್ತರದಾಯಿಯಾಗುತ್ತೇನೆಯೇ? ಹಾಗಾದರೆ, ನಿಮ್ಮ ಪಕ್ಷದ ನಾಯಕರ ಜೊತೆ ಫೋಟೋ ತೆಗೆಿಸಿಕೊಂಡವರು, ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡವರು ಜೈಲು ಪಾಲಾದ ಉದಾಹರಣೆಗಳಿಲ್ಲವೇ? ಆಗ ನಿಮ್ಮ ನಾಯಕರುಗಳೆಲ್ಲ ಆ ಅಪರಾಧಗಳ "ನೈತಿಕ ಹೊಣೆ" ಹೊತ್ತಿದ್ದಾರೆಯೇ?

ಬಹಳ ಹಿಂದೆ ಯಶವಂತಪುರದ ಪೆಟ್ರೋಲ್ ಬಂಕ್ ಬಳಿ ನನ್ನ ಗಾಡಿಗೆ ಇಂಧನ ತುಂಬಿಸುತ್ತಿರುವಾಗ ಈ ವ್ಯಕ್ತಿಯ ಪರಿಚಯವಾಗಿತ್ತು. ನಾನು ಒಮ್ಮೆ ಮಾತ್ರ ಅವರನ್ನು ಭೇಟಿ ಮಾಡಿರುವುದು. ಈಗೇನಾದರೂ ನನಗೆ ಎದುರಿಗೆ ಸಿಕ್ಕರೆ ಅವರನ್ನು ಗುರುತು ಹಿಡಿಯುವುದೂ ಅಸಾಧ್ಯ ಎಂದಿದ್ದಾರೆ.

B K Hariprasad, Karunakara Bhat and Suresh kumar (File photo)
ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ; ವ್ಯಕ್ತಿಯ ಹತ್ಯೆ: MLA ಸುರೇಶ್ ಕುಮಾರ್ ನೈತಿಕ ಹೊಣೆ ಹೊರಬೇಕು; ಇದೇನಿದು ಹರಿಪ್ರಸಾದ್ ಆರೋಪ?

ನನಗೆ ಸಂವಿಧಾನ ಬಗ್ಗೆ ಚೆನ್ನಾಗಿ ಅರಿವಿದೆ

​ನೀವು ನನಗೆ ಸಂವಿಧಾನದ ಆರ್ಟಿಕಲ್ 51A(h) ಪಾಠ ಮಾಡಲು ಬಂದಿದ್ದೀರಿ. ಒಬ್ಬ ಮಾಜಿ ಕಾನೂನು ಸಚಿವನಾಗಿ ಸಂವಿಧಾನದ ಪ್ರತಿಯೊಂದು ಸಾಲಿನ ಮಹತ್ವ ನನಗೆ ಚೆನ್ನಾಗಿ ತಿಳಿದಿದೆ. "ವೈಜ್ಞಾನಿಕ ಮನೋಭಾವ" ಮತ್ತು "ತಾರ್ಕಿಕತೆ" ಎಂದರೆ, ಘಟನೆಗಳ ಸತ್ಯಾಸತ್ಯತೆಯನ್ನು ಅರಿಯದೇ, ಕೇವಲ ರಾಜಕೀಯ ದ್ವೇಷಕ್ಕಾಗಿ ಇಲ್ಲಸಲ್ಲದ ಆರೋಪ ಮಾಡುವುದಲ್ಲ. ತನಿಖೆ ನಡೆಯುತ್ತಿರುವ ಗಂಭೀರ ಪ್ರಕರಣವೊಂದರಲ್ಲಿ, ನೇರ ಸಾಕ್ಷ್ಯಗಳಿಲ್ಲದೇ ಒಬ್ಬ ಶಾಸಕನ ಪಾತ್ರವಿದೆ ಎಂದು ತೀರ್ಪು ನೀಡುವುದು ಯಾವ ರೀತಿಯ "ವೈಜ್ಞಾನಿಕ ಮನೋಭಾವ"? ಇದು ಪಕ್ಕಾ "ಪೂರ್ವಾಗ್ರಹ ಪೀಡಿತ ಮನಸ್ಥಿತಿ". ಇನ್ನೂ ಹೆಚ್ಚಾಗಿ ಹೇಳಬೇಕೆಂದರೆ ಇದು ಕೊಳೆತ ಮನಸ್ಥಿತಿ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com