ಬೆಂಗಳೂರು: ಉದ್ಯಮಿ ಕಿಡ್ನಾಪ್ ಪ್ರಕರಣ; ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ ಬಂಧನ

ರಿಯಲ್‌ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು. ಆ ಪ್ರಕರಣದಲ್ಲಿ ಯಶಸ್ವಿನಿಗೌಡ ಅವರ ಪಾತ್ರವಿರುವುದು ಕಂಡಬಂದಿತ್ತು.
yashaswini gowda
ಯಶಸ್ವಿನಿ ಗೌಡ
Updated on

ಬೆಂಗಳೂರು: ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿಗೆ ಮಾಡಿದ್ದ ಪ್ರಕರಣದ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡಳನ್ನು ಸಿಸಿಬಿಯ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ಬಂಧಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಿ ಆಸ್ಪತ್ರೆ ರಸ್ತೆಯಲ್ಲಿ ಸೆ.26ರಂದು ಸಂಜೆ 6.30ರ ಸುಮಾರಿಗೆ ರಿಯಲ್‌ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು. ಆ ಪ್ರಕರಣದಲ್ಲಿ ಯಶಸ್ವಿನಿಗೌಡ ಅವರ ಪಾತ್ರವಿರುವುದು ಕಂಡಬಂದಿತ್ತು. ಕೋಕಾ ಕಾಯ್ದೆ ಅಡಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ತನಿಖೆಯಲ್ಲಿ ರೌಡಿಶೀಟರ್ ಬೇಕರಿ ರಘು ಕೈವಾಡ ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ, ಆತನನ್ನು ಸಹ ಇತ್ತೀಚೆಗೆ ಮಂಡ್ಯದಲ್ಲಿ ಬಂಧಿಸಲಾಗಿತ್ತು. ಆಗ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದ ಮೇಲೆ ಯಶಸ್ವಿನಿ ಗೌಡ ವಿರುದ್ಧ ಮಂಡ್ಯ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉದ್ಯಮಿ ಮನೋಜ್ ಕುಮಾರ್‌ ಅವರಿಗೆ ಪರಿಚಿತನಾಗಿದ್ದ ರಾಜೇಶ್‌ ಖ್ಯಾತ ಸಿನಿಮಾ ನಿರ್ದೇಶಕರೊಬ್ಬರಿಗೆ 1.20 ಲಕ್ಷ ರೂಪಾಯಿ ಸಾಲ ಕೊಡಿಸಿದ್ದ. ಆದರೆ ಒಂದು ವರ್ಷ ಕಳೆದರೂ ಸಾಲದ ಹಣವನ್ನು ನಿರ್ದೇಶಕ ಹಿಂತಿರುಗಿಸದಿದ್ದಾಗ ರಾಜೇಶ್ ಮೇಲೆ ಮನೋಜ್ ಕುಮಾರ್‌ ಒತ್ತಡ ಹೇರಿದ್ದರು.

yashaswini gowda
ಬೆಂಗಳೂರು: ಕನ್ನಡಕ್ಕೆ ಅಪಮಾನ, ಹಾಸ್ಟೆಲ್ ವಾರ್ಡನ್ ಬಂಧನ, ಅಮಾನತು!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com