

ಬೆಂಗಳೂರು: ತಮಿಳುನಾಡು ಗಡಿಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ಬ್ಯಾಲಕೆರೆ ಗ್ರಾಮದ ಬಳಿ ಕಾಡಾನೆ ದಾಳಿ ಮಾಡಿದ್ದು 58 ವರ್ಷದ ವೆಂಕಟೇಶ್ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದು ಗುಮ್ಮಳಾಪುರ ಗ್ರಾಮದ ರಸ್ತೆಯಲ್ಲಿ ಶವ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
Advertisement