

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ಶಾಲೆಗೆ ಹೋಗುತ್ತಿದ್ದ ಬಾಲಕನೋರ್ವ ಚರಂಡಿಗೆ ಬಿದ್ದಿರುವ ಘಟನೆ ಸರ್ವಜ್ಞನಗರದ ಗೋವಿಂದಪುರದಲ್ಲಿ ಶುಕ್ರವಾರ ನಡೆದಿದೆ.
ಶಾಲೆಯ ಎದುರು ಜಿಬಿಎ ಚರಂಡಿ ಕಾಮಗಾರಿ ನಡೆಸುತ್ತಿದ್ದು, ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಚರಂಡಿ ತೆರೆದೇ ಇದ್ದರು, ಬ್ಯಾರಿಕೇಡ್ ಆಗಲೀ, ಎಚ್ಚರಿಕೆ ಫಲಕವನ್ನಾಗಲೀ ಹಾಕಿಲ್ಲ. ಇದರಿಂದ ಸಂಚಾರಕ್ಕೆ ಈ ರಸ್ತೆ ಸಂಪೂರ್ಣವಾಗಿ ಅಸುರಕ್ಷಿತವಾಗಿದ್ದು, ಶಾಲೆಗೆ ಹೋಗಲು ವಿದ್ಯಾರ್ಥಿಗಳು ರಸ್ತೆಯ ಅಂಚಿನಲ್ಲಿ ನಡೆದು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಶುಕ್ರವಾರ ಇದೇ ರಸ್ತೆಯಲ್ಲಿ ನಡೆದು ಶಾಲೆಗೆ ಹೋಗುತ್ತಿದ್ದ ಬಾಲಕ ಚರಂಡಿಗೆ ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಬಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರಿಂದ ಆಕ್ರೋಶಗಳು ವ್ಯಕ್ತವಾಗುತ್ತಿವ.
Advertisement