

ಬೆಂಗಳೂರು: ನಗರದ 26 ವರ್ಷದ ದೇಹದಾರ್ಢ್ಯ ಪಟುಯೊಬ್ಬರು ಬೇರೊಬ್ಬ ವ್ಯಕ್ತಿಯೊಂದಿಗೆ ತನ್ನ ಮದುವೆ ನಿಶ್ಚಯವಾಗಿದೆ ಎಂದು ಪ್ರೇಯಸಿ ತಿಳಿಸಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ವೃತ್ತಿಯಲ್ಲಿ ಬಾಡಿಬಿಲ್ಡರ್ ಮತ್ತು ಜಿಮ್ ಟ್ರೈನರ್ ಆಗಿರುವ ಕಿರಣ್ ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದರು. ಶನಿವಾರ, ಆತ ತನ್ನ ಪ್ರೇಯಸಿಯನ್ನು ಭೇಟಿಯಾದಾಗ, ಆಕೆ ಇನ್ನೊಬ್ಬ ವ್ಯಕ್ತಿಯೊಂದಿಗೆ ತನಗೆ ನಿಶ್ಚಿತಾರ್ಥವಾಗಿರುವ ಬಗ್ಗೆ ತಿಳಿಸಿದ್ದಾರೆ.
ಈ ಸುದ್ದಿಯಿಂದ ಅಸಮಾಧಾನಗೊಂಡ ಆತ, ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಮನೆಗೆ ಮರಳಿದ್ದಾರೆ. ತನ್ನ ಕೊಠಡಿಯೊಳಗೆ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾರೆ.
ಕೊಠಡಿಯಿಂದ ಹೊರಬರದಿದ್ದಾಗ, ಅವರ ಕುಟುಂಬ ಸದಸ್ಯರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಕಿರಣ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಿರಣ್ ಅವರ ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement