ಕೇಂದ್ರ ಸರ್ಕಾರದ ಸೂಚನೆ ಬೆನ್ನಲ್ಲೇ, ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್!

ಕಳೆದ 10 ತಿಂಗಳ ಹಿಂದಷ್ಟೇ ಮೆಟ್ರೋ ದರ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಬರೆ ಎಳೆದಿದ್ದ ದರ ನಿಗದಿ ಸಮಿತಿ ಮತ್ತೆ ಶೇ. 5 ರಷ್ಟು ದರ ಏರಿಕೆ ಮಾಡಿ ಶಿಫಾರಸ್ಸು ಮಾಡಿತ್ತು.
Metro Rail
ನಮ್ಮ ಮೆಟ್ರೋ ರೈಲು ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಜನಾಕ್ರೋಶದ ಬಳಿಕ ಮೆಟ್ರೋ ದರ ಏರಿಕೆಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ಕೊನೆಗೂ ಕೈಬಿಟ್ಟಿದೆ.

ಹೌದು. ಕಳೆದ 10 ತಿಂಗಳ ಹಿಂದಷ್ಟೇ ಮೆಟ್ರೋ ದರ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಬರೆ ಎಳೆದಿದ್ದ ದರ ನಿಗದಿ ಸಮಿತಿ ಮತ್ತೆ ಶೇ. 5 ರಷ್ಟು ದರ ಏರಿಕೆ ಮಾಡಿ ಶಿಫಾರಸ್ಸು ಮಾಡಿತ್ತು. ಅದಕ್ಕೆ ರಾಜ್ಯ ಸರ್ಕಾರದ ಒಪ್ಪಿಗೆಯೂ ಸಿಕ್ಕಿತ್ತು. ಇದು ನಾಳೆಯಿಂದ ಜಾರಿಗೆ ಬರಬೇಕಾಗಿತ್ತು. ಆದರೆ ಇದಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದ್ದು, ದರ ಹೆಚ್ಚಳ ಮಾಡದಂತೆ ಬಿಎಂಆರ್ ಸಿಎಲ್ ಗೆ ಸೂಚಿಸಿದೆ.

ಮೆಟ್ರೋ ದರ ಏರಿಕೆ ವಿಚಾರ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಬಿಜೆಪಿ ನಾಯಕರ ನಡುವಣ ಜಟಾಪಟಿಗೂ ಕಾರಣವಾಗಿತ್ತು. ಈ ನಡುವೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಎಂ.ಎಲ್​​ ಖಟ್ಟರ್​​ ಅವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ, ವಾರ್ಷಿಕ ದರ ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಅಗತ್ಯವಿದ್ದರೆ ಸಾರ್ವಜನಿಕ ಹಿತದೃಷ್ಟಿಯಿಂದ ದರ ಪರಿಷ್ಕರಿಸಲು ಹೊಸ ದರ ನಿಗದಿ ಸಮಿತಿಯನ್ನು ರಚಿಸುವಂತೆ ಮನವಿ ಮಾಡಿದ್ದರು.

ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಸಚಿವರು, ಪ್ರಸ್ತಾವಿತ ಹೆಚ್ಚಳವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಬಿಎಂಆರ್ ಸಿಎಲ್ ಗೆ ಸೂಚನೆ ನೀಡಿದ್ದಾರೆ ಎಂದು ಶನಿವಾರ ಹೇಳಿದ್ದರು.

ಅದರಂತೆ ಮೆಟ್ರೋ ದರ ಏರಿಕೆ ನಿರ್ಧಾರದಿಂದ ಬಿಎಂಆರ್ ಸಿಎಲ್ ಹಿಂದೆ ಸರಿದಿದ್ದು, ಬೆಂಗಳೂರಿಗರಿಗೆ ಸ್ವಲ್ಪ ನೆಮ್ಮದಿ ಸಿಕ್ಕಂತಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಎಂಆರ್ ಸಿಎಲ್, ಫೆ. 5 ರಂದು ಪ್ರಕಟಿಸಿದ್ದ ಮಾಧ್ಯಮ ಪ್ರಕಟಣೆಯಲ್ಲಿ ನಾಳೆಯಿಂದ ವಾರ್ಷಿಕ ಸ್ವಯಂ ಚಾಲಿತ ದರ ಜಾರಿಗೆ ಬರಲಿದೆ ಎಂದು ತಿಳಿಸಲಾಗಿತ್ತು. ಆದರೆ, ಈ ನಿರ್ಧಾರವನ್ನು ಮುಂದಿನ ಆದೇಶದವರೆಗೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದೆ.

Metro Rail
'Mr CM, ನಾಟಕ ನಿಲ್ಲಿಸಿ': ಸಂಸದ ತೇಜಸ್ವೀ ಸೂರ್ಯ

ಪರಿಷ್ಕೃತ ದರ ಕುರಿತು ಅಂತಿಮ ನಿರ್ಧಾರವನ್ನು ನಿರ್ದೇಶಕರ ಮಂಡಳಿಯ ಪರಿಶೀಲನೆಯ ನಂತರ ಪ್ರಕಟಿಸಲಾಗುವುದು ಎಂದು ಹೇಳಿದೆ. ಬಿಎಂಆರ್ ಸಿಎಲ್ ಬೆಂಗಳೂರು ನಾಗರಿಕರಿಗೆ ಸುರಕ್ಷಿತ, ನಂಬಿಗಸ್ತ ಮತ್ತು ಕೈಗೆಟುಕುವ ಮೆಟ್ರೋ ಸೇವೆಗಳನ್ನು ಒದಗಿಸಲು ಸದಾ ಬದ್ಧವಾಗಿದೆ ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com