ವಿಜಯಪುರ: ಖಾಸಗಿ ತರಬೇತಿ ವಿಮಾನ ಅಪಘಾತ, ಕೂದಲೆಳೆ ಅಂತರದಲ್ಲಿ ಇಬ್ಬರು ಪಾರು! Video

ಮಂಗಳೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಎರಡು ಆಸನಗಳ ತರಬೇತಿ ವಿಮಾನವೊಂದು ತೆರೆದ ಗದ್ದೆಯಲ್ಲಿ ಪತನಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಪಘಾತಕ್ಕೀಡಾದ ಲಘು ವಿಮಾನ
ಅಪಘಾತಕ್ಕೀಡಾದ ಲಘು ವಿಮಾನ
Updated on

ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನಲ್ಲಿ ಭಾನುವಾರ ಖಾಸಗಿ ತರಬೇತಿ ವಿಮಾನವೊಂದು ಪತನಗೊಂಡಿದ್ದು, ಪೈಲಟ್ ಸೇರಿದಂತೆ ಇಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಮಂಗಳೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಎರಡು ಆಸನಗಳ ತರಬೇತಿ ವಿಮಾನವೊಂದು ತೆರೆದ ಗದ್ದೆಯಲ್ಲಿ ಪತನಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಪಘಾತದ ಪರಿಣಾಮ ವಿಮಾನ ಮೂರು ಭಾಗಗಳಾಗಿ ಒಡೆದಿದೆ. ಪೈಲಟ್ ಸೇರಿದಂತೆ ಇಬ್ಬರು ಪ್ರಯಾಣಿಕರು ವಿಮಾನ ಪತನಗೊಳ್ಳುವುದಕ್ಕೂ ಮುನ್ನ ಹೊರಗೆ ಹಾರಿದ್ದಾರೆ.

ಅಪಘಾತಕ್ಕೀಡಾದ ಲಘು ವಿಮಾನ
ವಿಮಾನ ಅಪಘಾತ: ಟೇಕ್ ಆಫ್ ವೇಳೆ ಜೆಟ್ ಅಪಘಾತ; 7 ಮಂದಿ ಸಾವು, ಬದುಕುಳಿದ ಓರ್ವ ಸಿಬ್ಬಂದಿ!

ಇಬ್ಬರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತರಬೇತಿ ವಿಮಾನವು ಕಲಬುರಗಿಯಿಂದ ಬೆಳಗಾವಿಗೆ ತೆರಳುತಿತ್ತು ಎನ್ನಲಾಗಿದೆ. ಆದರೂ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com