ಕೊಡಗು: SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ, ಪ್ರಾಣಾಪಾಯದಿಂದ ಪಾರು; Video

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಎಚ್ಚರಿಕೆಯಿಂದ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Car of Abdul Majid
ಅಬ್ದುಲ್ ಮಜೀದ್ ಅವರ ಕಾರು
Updated on

ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಇಂದು ಭಾನುವಾರ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಎಚ್ಚರಿಕೆಯಿಂದ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಕುಶಾಲನಗರ ಅಗ್ನಿಶಾಮಕ ದಳ, ಸ್ಥಳಕ್ಕೆ ಆಗಮಿಸಿ ತಕ್ಷಣವೇ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು.

ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿಗೆ ಹೆಚ್ಚಿನ ಹಾನಿಯಾಗಿದ್ದು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com