ಒಳಗೆ ಸೇರಿದರೆ ಗುಂಡು..: ಕುಡಿದ ಮತ್ತಿನಲ್ಲಿ ಕಾರಿಗೆ ಢಿಕ್ಕಿ, ಪ್ರಶ್ನಿಸಿದ ಚಾಲಕನೊಂದಿಗೆ ಯುವತಿಯರ ರಂಪಾಟ, Video

ಬೆಂಗಳೂರಿನ ಹುಳಿಮಾವು ಬಳಿ ಮದ್ಯದ ಅಮಲಿನಲ್ಲಿ ಯುವತಿಯರು ಸ್ಕೂಟಿಯಿಂದ ಕ್ಯಾಬ್‌ಗೆ ಡಿಕ್ಕಿ ಹೊಡೆದು ರಂಪಾಟ ಮಾಡಿದ್ದಾರೆ.
Drunk Bengaluru Women Crash Into Cab
ಕುಡಿದ ಮತ್ತಿನಲ್ಲಿ ಮಹಿಳೆಯರ ಜಗಳ
Updated on

ಬೆಂಗಳೂರು: ಮದ್ಯದ ಅಮಲಿನಲ್ಲಿ ಕಾರು, ಬೈಕ್​ಗಳಿಗೆ ದ್ವಿಚಕ್ರ ವಾಹನ ಗುದ್ದಿ ಯುವತಿಯರು ಕಿರಿಕ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಹುಳಿಮಾವು ಬಳಿ ಮದ್ಯದ ಅಮಲಿನಲ್ಲಿ ಯುವತಿಯರು ಸ್ಕೂಟಿಯಿಂದ ಕ್ಯಾಬ್‌ಗೆ ಡಿಕ್ಕಿ ಹೊಡೆದು ರಂಪಾಟ ಮಾಡಿದ್ದಾರೆ. ಚಾಲಕ ಪ್ರಶ್ನಿಸಿದಾಗ ಹಲ್ಲೆ ಮಾಡಲು ಯತ್ನಿಸಿ, ಸ್ಥಳೀಯರ ಜೊತೆ ಕಿರಿಕ್ ಮಾಡಿದ್ದಾರೆ.

ಹೆಲ್ಮೆಟ್ ನಿಂದ ಕಾರು ಚಾಲಕನ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದು ಈ ವೇಳೆ ಸಾರ್ವಜನಿಕರ ಮಧ್ಯಪ್ರವೇಶದ ನಂತರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಘಟನೆ ಸಂಬಂಧ ಇಬ್ಬರು ಯುವತಿಯರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಲೀಸಾ ಮತ್ತು ಮ್ಯಾಥ್ಯೂ ಎಂಬ ಯುವತಿಯರ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

Drunk Bengaluru Women Crash Into Cab
ಬೆಂಗಳೂರು: ಬೇರೆಯವರೊಂದಿಗೆ ಪ್ರೇಯಸಿಗೆ ನಿಶ್ಚಿತಾರ್ಥ; ಮನನೊಂದು ಬಾಡಿ ಬಿಲ್ಡರ್ ಆತ್ಮಹತ್ಯೆ!

ಉತ್ತರ ಭಾರತದ ಯುವತಿಯರು

ಕ್ಯಾಬ್ ಡ್ರೈವರ್ ಜೊತೆ ವಾಗ್ವಾದ ನಡೆಸಿ ಆತನ ಮೇಲೆ ಹಲ್ಲೆ ನಡೆಸಲು ಉತ್ತರ ಭಾರತೀಯ ಯುವತಿಯರು ಯತ್ನಿಸಿದ್ದು, ಪ್ರಶ್ನಿಸಿದ ಜನರ ಜೊತೆಗೂ ಯುವತಿಯರು ಅಸಭ್ಯವಾಗಿ ವರ್ತಿಸಿದ್ದಾರೆ. ಕೂಡಲೇ ಸಾರ್ವಜನಿಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಬಂದರೂ ಯುವತಿಯರ ಹೈಡ್ರಾಮಾ ಮಾತ್ರ ನಿಂತಿರಲಿಲ್ಲ.

ಆಗಿದ್ದೇನು?

ಸ್ನೇಹಿತರ ಜೊತೆಗೆ ಹೋಟೆಲ್​ಗೆ ಬಂದಿದ್ದ ಜೆ.ಪಿ.ನಗರ ಹಾಗೂ ಕೋರಮಂಗಲದ ಇಬ್ಬರು ಯುವತಿಯರು ವಾಪಸ್ ಹೋಗುವಾಗ ಹಿಂದಿನಿಂದ ಕ್ಯಾಬ್​ಗೆ ಸ್ಕೂಟಿ ಡಿಕ್ಕಿ ಹೊಡೆದಿದ್ದಾರೆ. ಯುವತಿಯರನ್ನು ಕ್ಯಾಬ್ ಚಾಲಕ ಅಹ್ಮದ್ ಪ್ರಶ್ನೆ ಮಾಡಿದ್ದಕ್ಕೆ, ಆತನಿಗೆ ನಿಂದಿಸಿ ಪರಾರಿಯಾಗಲು ಯತ್ನಿಸಿದ್ದು ಈ ವೇಳೆ ಯುವತಿಯರನ್ನು ಸ್ಥಳೀಯರು ತಡೆದಿದ್ದಾರೆ.

ಈ ವೇಳೆ ಕೈಗೆ ಚೈನ್ ಸುತ್ತಿಕೊಂಡು ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಅಸಭ್ಯ ಸನ್ನೆ ತೋರಿಸಿ ನಿಂದನೆ ನಡೆಸಿರುವ ಆರೋಪ ಕೇಳಿಬಂದಿದೆ. ಬಳಿಕ ಇಬ್ಬರು ಯುವತಿಯರನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com