ಕೆನಡಾ: ಶೂಟ್ ಮಾಡಿ ಬೆಂಗಳೂರು ಮೂಲದ ಯುವಕನ ಹತ್ಯೆ; ಗುಂಡೇಟಿಗೆ ಕನ್ನಡಿಗ ಬಲಿ

ಚಂದನ್ ಕುಮಾರ್ ಬೆಂಗಳೂರಿನ ನೆಲಮಂಗಲ ಮೂಲದ ತ್ಯಾಮಗೊಂಡ್ಲುವಿನ ನಿವಾಸಿ. ಕಳೆದ 6 ವರ್ಷಗಳಿಂದ ಚಂದನ್ ಕುಮಾರ್ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
Chandan kumar
ಚಂದನ್ ಕುಮಾರ್
Updated on

ಬೆಂಗಳೂರು: ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕರ್ನಾಟಕ ಮೂಲದ ಯುವಕನೊಬ್ಬ ಬಲಿಯಾದ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ನೆಲಮಂಗಲ ಮೂಲದ ಚಂದನ್ ಕುಮಾರ್(37) ಎಂದು ಗುರುತಿಸಲಾಗಿದೆ.

ಚಂದನ್ ಕುಮಾರ್ ಬೆಂಗಳೂರಿನ ನೆಲಮಂಗಲ ಮೂಲದ ತ್ಯಾಮಗೊಂಡ್ಲುವಿನ ನಿವಾಸಿ. ಕಳೆದ 6 ವರ್ಷಗಳಿಂದ ಚಂದನ್ ಕುಮಾರ್ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಭಾನುವಾರ ರಾತ್ರಿ 9 ಗಂಟೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಂದನ್ ಕುಮಾರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಹಲವು ಗುಂಡುಗಳು ಚಂದನ್ ದೇಹವನ್ನು ಹೊಕ್ಕಿವೆ. ಘಟನಾ ಸ್ಥಳದಲ್ಲೇ ಚಂದನ್ ಸಾವನ್ನಪ್ಪಿದ್ದಾರೆ. ಚಂದನ್ ಬ್ರಾಂಪ್ಟನ್‌ನಲ್ಲಿರುವ ಶಿರಡಿ ಸಾಯಿಬಾಬಾ ದೇವಾಲಯದ ಸಕ್ರಿಯ ಸದಸ್ಯರಾಗಿದ್ದರು.

ಲಭ್ಯವಿರುವ ಮಾಹಿತಿಯ ಪ್ರಕಾರ, ಚಂದನ್ ಕುಮಾರ್ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ವರದಿಯಲ್ಲಿ ಲಭ್ಯವಾಗಿರುವ ದೃಶ್ಯಾವಳಿಗಳ ಪ್ರಕಾರ, ಚಂದನ್ ಅವರ ಕಾರಿನ ಮುಂಭಾಗದ ಗಾಜಿನ ಮೇಲೆ ಗುಂಡು ಹೊಕ್ಕಿರುವ ಗುರುತುಗಳು ಸ್ಪಷ್ಟವಾಗಿ ಕಂಡುಬಂದಿವೆ. ಇದು ಪಾಯಿಂಟ್ ಬ್ಲಾಂಕ್ ರೇಂಜ್‌ನಲ್ಲಿ ಅಥವಾ ಸಮೀಪದಿಂದ ನಡೆಸಲಾದ ದಾಳಿ ಇರಬಹುದೆಂದು ಶಂಕಿಸಲಾಗಿದೆ.

Chandan kumar
Watch | ಮಿನ್ನಿಯಾಪೋಲಿಸ್ ಗುಂಡಿಟ್ಟು ಮಹಿಳೆ ಹತ್ಯೆ; ಟ್ರಂಪ್ ಸಮರ್ಥನೆ; ಎಲ್ಲೆಡೆ ಪ್ರತಿಭಟನೆ

ಮಗನ ಹತ್ಯೆಯ ವಿಷಯ ತಿಳಿಯುತ್ತಿದ್ದಂತೆಯೇ ಚಂದನ್ ಅವರ ನಿವಾಸದಲ್ಲಿ ಶೋಕ ಮಡುಗಿದೆ. ಪೋಷಕರು ಮತ್ತು ಸಂಬಂಧಿಕರು ಮಗನನ್ನು ಕಳೆದುಕೊಂಡ ದುಃಖದಲ್ಲಿ ಕಣ್ಣೀರಿಡುತ್ತಿದ್ದಾರೆ. ಮಗನ ಶವನನ್ನು ತವರಿಗೆ ತರಲು ಸರ್ಕಾರ ಸಹಾಯ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಸದ್ಯ ಕೆನಡಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಹತ್ಯೆಗೆ ನಿಖರವಾದ ಕಾರಣವೇನು ಎಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ. ಚಂದನ್ ಕನ್ನಡ ಸಮುದಾಯದಲ್ಲಿಯೂ ಸಕ್ರಿಯರಾಗಿದ್ದರು.

ಅವರು ನಿಜವಾಗಿಯೂ ದಯಾಳು ಮತ್ತು ವಿನಮ್ರ ವ್ಯಕ್ತಿಯಾಗಿದ್ದರು, ಹಲವಾರು ಸಮುದಾಯ ಸಾಮಾಜಿಕ ಕಾರ್ಯಕ್ರಮಗಳನ್ನು ಬೆಂಬಲಿಸಲು ಮತ್ತು ಭಾಗವಾಗಲು ಸಿದ್ಧರಿದ್ದರು ಎಂದು ಅವರ ಸ್ನೇಹಿತರು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com