ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಇಬ್ಬರು ಪ್ರಯಾಣಿಕರ ಬಂಧನ, 2 ಕೋಟಿ ರೂ ಮೌಲ್ಯದ ಗಾಂಜಾ ವಶ!

ಮೊದಲನೇಯ ಪ್ರಕರಣದಲ್ಲಿ ಫೆ. 7 ರಂದು ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರೊಬ್ಬರನ್ನು ತಡೆದು 63 ಲಕ್ಷ ಮೌಲ್ಯದ 1.8 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
Casual Images
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕ ಘಟನೆಗಳಲ್ಲಿ 2 ಕೋಟಿ ರೂ. ಗೂ ಅಧಿಕ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಮೊದಲನೇಯ ಪ್ರಕರಣದಲ್ಲಿ ಫೆ. 7 ರಂದು ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರೊಬ್ಬರನ್ನು ತಡೆದು 63 ಲಕ್ಷ ಮೌಲ್ಯದ 1.8 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಸೂಟ್‌ಕೇಸ್‌ನ ತಳಭಾಗದಲ್ಲಿ ಗಾಂಜಾ ಇಟ್ಟು ಕಳ್ಳಸಾಗಣೆ ಮಾಡಲಾಗುತಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ಸಾಮಾಜಿಕ ಜಾಲತಾಣ 'ಎಕ್ಸ್' ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Casual Images
ಬೆಂಗಳೂರು ಏರ್ ಫೋರ್ಟ್ ನಲ್ಲಿ ಇಬ್ಬರು ಪ್ರಯಾಣಿಕರ ಬಂಧನ: 2.18 ಕೋಟಿ ರೂ ಮೌಲ್ಯದ ಗಾಂಜಾ ವಶ!

ಮತ್ತೊಂದು ಪ್ರಕರಣದಲ್ಲಿ ಫೆಬ್ರವರಿ 6 ರಂದು, ಹಾಂಕಾಂಗ್‌ನಿಂದ ಆಗಮಿಸಿದ ಪ್ರಯಾಣಿಕರನ್ನು ತಡೆದು ಪರಿಶೀಲನೆ ನಡೆಸಿದಾಗ ಅವರ ಬ್ಯಾಗೇಜ್‌ನಿಂದ 1.76 ಕೋಟಿ ಮೌಲ್ಯದ 5.05 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಇಬ್ಬರೂ ಆರೋಪಿಗಳನ್ನು NDPS ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com