ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: 18 ಅಭ್ಯರ್ಥಿಗಳ ಬಂಧನ

ಫೆಬ್ರವರಿ 8 ರಂದು ನಡೆದ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ನಕಲು ಮಾಡಿದ ಆರೋಪದ ಮೇಲೆ 18 ಪರೀಕ್ಷಾರ್ಥಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
18 candidates arrested for cheating in Army Group C recruitment exam
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ ಮತ್ತು ಅಕ್ರಮದಲ್ಲಿ ತೊಡಗಿರುವ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಫೆಬ್ರವರಿ 8 ರಂದು ನಡೆದ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ನಕಲು ಮಾಡಿದ ಆರೋಪದ ಮೇಲೆ 18 ಪರೀಕ್ಷಾರ್ಥಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

515 ಸೇನಾ ನೆಲೆ ಕಾರ್ಯಾಗಾರದ ಕಮಾಂಡೆಂಟ್ ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ ಕರ್ನಲ್ ಹಾಗೂ ಭದ್ರತಾ ಅಧಿಕಾರಿ ಎಸ್ ಎಸ್ ಜ್ಯೋತಿರ್ಲಿಂಗಂ ಅವರು ನೀಡಿದ ಎಫ್‌ಐಆರ್ ಆಧರಿಸಿ ಈ ಬಂಧನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

18 candidates arrested for cheating in Army Group C recruitment exam
KMFನಲ್ಲಿ ಉದ್ಯೋಗದ ಆಮಿಷ: 50 ಲಕ್ಷ ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಸಿವಿಲ್ ಡಿಫೆನ್ಸ್ ಎಂಪ್ಲಾಯಿ ರೆಕ್ರೂಟ್‌ಮೆಂಟ್‌ನ ಗ್ರೂಪ್ ಸಿ ವಿಭಾಗದ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಎಫ್‌ಐಆರ್ ಪ್ರಕಾರ, ಪರೀಕ್ಷೆಯ ಸಮಯದಲ್ಲಿ, ಅಕ್ರಮ ವಿಧಾನಗಳ ಮೂಲಕ ಸರ್ಕಾರಿ ಉದ್ಯೋಗವನ್ನು ಪಡೆಯುವ ಉದ್ದೇಶದಿಂದ ಡಿಜಿಟಲ್ ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸಿ ನಕಲು ಮಾಡುತ್ತಿದ್ದ ವೇಳೆ 18 ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಪರೀಕ್ಷಾ ಆವರಣದೊಳಗೆ ಅವರ ಬಳಿ ಎಲೆಕ್ಟ್ರಾನಿಕ್ ಸಾಧನಗಳು ಪತ್ತೆಯಾಗಿವೆ.

"ದೂರಿನ ಆಧಾರದ ಮೇಲೆ, ನಾವು ವಂಚನೆ ಮತ್ತು ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದೇವೆ. ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಭ್ಯರ್ಥಿಗಳನ್ನು ವಿಚಾರಣೆ ಮಾಡಿದ ನಂತರ, ಫೆಬ್ರವರಿ 9 ರಂದು ಘಟನೆಗೆ ಸಂಬಂಧಿಸಿದಂತೆ ನಾವು 18 ಮಂದಿಯನ್ನು ಬಂಧಿಸಿದ್ದೇವೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com