ಅಸ್ಸಾಂ ಚುನಾವಣೆ ಸಂಬಂಧ AICC ಸಭೆಗೆ ಡಿಕೆಶಿ ದೆಹಲಿಗೆ ತೆರಳುತ್ತಿದ್ದಾರೆ, ನಾಯಕತ್ವ ಕುರಿತು ಗೊಂದಲ ಬೇಡ: ಸಿಎಂ ಸಿದ್ದರಾಮಯ್ಯ; Video

ರಾಜ್ಯದ ನಾಯಕತ್ವ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ. ಈ ವಿಷಯವನ್ನು ಪದೇಪದೇ ಕೇಳುವುದು ಬೇಡ. ಆಹ್ವಾನ ಬಂದರೆ ಮಾತ್ರ ನಾನು ದೆಹಲಿಗೆ ಹೋಗುತ್ತೇನೆ, ಆಹ್ವಾನವಿಲ್ಲದೆ ಹೋಗುವ ಅಗತ್ಯವಿಲ್ಲ.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಅಸ್ಸಾಂ ವಿಧಾನಸಭಾ ಚುನಾವಣೆ ತಯಾರಿ ಸಂಬಂಧ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಸಭೆಗಳಲ್ಲಿ ಭಾಗವಹಿಸಲು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ (ಎಐಸಿಸಿ) ಸಭೆಗಳಲ್ಲಿ ಭಾಗವಹಿಸಲು ಡಿಕೆ. ಶಿವಕುಮಾರ್ ಇಂದು ದೆಹಲಿಗೆ ಹೋಗುತ್ತಿರುವುದಾಗಿ ನನಗೆ ಪತ್ರ ಬರೆದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಬಜೆಟ್ ಕುರಿತು ಸಭೆ ನಡೆಸಲಾಗುವುದು ಎಂದು ಹೇಳಿದರು.

ಅಧಿಕಾರ ಹಂಚಿಕೆ ಕುರಿತ ಚರ್ಚೆಗಳಿಗೆ ಪ್ರತಿಕ್ರಿಯಿಸಿ, ರಾಜ್ಯದ ನಾಯಕತ್ವ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ. ಈ ವಿಷಯವನ್ನು ಪದೇಪದೇ ಕೇಳುವುದು ಬೇಡ. ಆಹ್ವಾನ ಬಂದರೆ ಮಾತ್ರ ನಾನು ದೆಹಲಿಗೆ ಹೋಗುತ್ತೇನೆ, ಆಹ್ವಾನವಿಲ್ಲದೆ ಹೋಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್, ಪಕ್ಷದ ಕನಿಷ್ಠ 80 ಶಾಸಕರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೆಸರನ್ನು ಹೈಕಮಾಂಡ್‌ಗೆ ನೀಡಿದ್ದಾರೆ ಎಂದು ಹೇಳಿದ್ದರು.

CM Siddaramaiah
ಬಾಯಿ ಮುಚ್ಚಿಕೊಂಡು ಇರಬೇಕೆಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು; ನಾನು-ಸಿದ್ದರಾಮಯ್ಯ ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ: ಡಿ.ಕೆ ಶಿವಕುಮಾರ್; Video

ಇದೇ ವೇಳೆ ಕಾಂಗ್ರೆಸ್ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗಳಿಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಪಕ್ಷದಲ್ಲಿ ಶಿಸ್ತು ಮುಖ್ಯ. ತಂದೆ-ಮಗ ಪ್ರೀತಿ ಸಹಜ, ಆದರೆ, ರಾಜಕೀಯದಲ್ಲಿ ಶಿಸ್ತಿನಿಂದ ನಡೆದುಕೊಳ್ಳಬೇಕು. ಇಂತಹ ಹೇಳಿಕೆಗಳು ಹೈಕಮಾಂಡ್‌ಗೆ ಮುಜುಗರ ಉಂಟುಮಾಡಬಾರದು ಎಂದು ತಿಳಿಸಿದರು.

ನಮ್ಮ ಹೃದಯದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಆಶಯ ಇದೆ. ಆದರೆ, ಪಕ್ಷದೊಳಗೆ ಗೊಂದಲ ಸೃಷ್ಟಿಯಾಗದಂತೆ ಎಲ್ಲರೂ ಸಂಯಮದಿಂದ ನಡೆದುಕೊಳ್ಳಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com