ತಾಂತ್ರಿಕ ಕಾರಣಕ್ಕೆ ಭೂಸ್ವಾಧೀನ ಪ್ರಕರಣಗಳ ಮೇಲ್ಮನವಿ ತಿರಸ್ಕಾರ ಬೇಡ, ಪ್ರಾಯೋಗಿಕ ದೃಷ್ಟಿಕೋನ ಅಳವಡಿಸಿಕೊಳ್ಳಿ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳು ಸಲ್ಲಿಸಿದ್ದ ಸುಮಾರು 530 ಮೇಲ್ಮನವಿಗಳನ್ನು ಅನುಮೋದಿಸಿದೆ.
Supreme Court
ಸುಪ್ರೀಂಕೋರ್ಟ್
Updated on

ನವದೆಹಲಿ/ಬೆಂಗಳೂರು: ಭೂಸ್ವಾಧೀನ ಪ್ರಕರಣಗಳಲ್ಲಿ ರಾಜ್ಯ ಸರ್ಕಾರಗಳ ಮೇಲ್ಮನವಿಗಳನ್ನು ಕೇವಲ ತಾಂತ್ರಿಕ ಕಾರಣಗಳಿಂದ ತಿರಸ್ಕರಿಸಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಈ ಆದೇಶ ರಾಜ್ಯ ಸರ್ಕಾರಕ್ಕೆ ಬಹುದೊಡ್ಡ ನಿರಾಳ ನೀಡಿದಂತಾಗಿದೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳು ಸಲ್ಲಿಸಿದ್ದ ಸುಮಾರು 530 ಮೇಲ್ಮನವಿಗಳನ್ನು ಅನುಮೋದಿಸಿದೆ.

2013ರ ಭೂಸ್ವಾಧೀನ ಕಾಯ್ದೆಯ ಸೆಕ್ಷನ್ 74 ಅಡಿಯಲ್ಲಿ ಮೇಲ್ಮನವಿ ಸಲ್ಲಿಸಲು ವಿಳಂಬವಾದರೂ, ಲಿಮಿಟೇಶನ್ ಕಾಯ್ದೆಯ ಸೆಕ್ಷನ್ 5 ಅಡಿಯಲ್ಲಿ ವಿಳಂಬ ಕ್ಷಮಿಸಲು ನ್ಯಾಯಾಲಯಗಳಿಗೆ ಅಧಿಕಾರವಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ವಿಳಂಬ ಕ್ಷಮಿಸುವ ಅರ್ಜಿಗಳ ವಿಚಾರದಲ್ಲಿ ಹೈಕೋರ್ಟ್‌ಗಳು ತಾಂತ್ರಿಕ ದೃಷ್ಟಿಕೋನಕ್ಕಿಂತ ಪ್ರಾಯೋಗಿಕ ದೃಷ್ಟಿಕೋನ ಅಳವಡಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಇದೇ ವೇಳೆ ಭೂಸ್ವಾಧೀನ ಪ್ರಕರಣಗಳಲ್ಲಿ ಮೇಲ್ಮನವಿ ಸಲ್ಲಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಸಹಕಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ನ್ಯಾಯಾಲಯ, ಉತ್ತಮ ನಿರ್ವಹಣೆ ಮತ್ತು ಮೇಲ್ವಿಚಾರಣಾ ವ್ಯವಸ್ಥೆ ರೂಪಿಸಬೇಕೆಂದು ಸೂಚನೆ ನೀಡಿದೆ.

Supreme Court
ರಾಜ್ಯ ಸರ್ಕಾರದ ಅಸಹಕಾರ: ಭೂಸ್ವಾಧೀನ ಪ್ರಕ್ರಿಯೆ ವಿಳಂಬ, ಕರ್ನಾಟಕದ ಪ್ರಮುಖ ರೈಲ್ವೆ ಯೋಜನೆಗಳು ಸ್ಥಗಿತ- ಅಶ್ವಿನಿ ವೈಷ್ಣವ್

ರಾಜ್ಯ ಸರ್ಕಾರ ವಿವಿಧ ಭಾಗಗಳಲ್ಲಿ ಮೂಲಸೌಕರ್ಯ ಯೋಜನೆಗಳಿಗಾಗಿ ಭೂಸ್ವಾಧೀನ ಪಡಿಸಿಕೊಂಡಿತ್ತು. ಈ ವೇಳೆ ಭೂಸ್ವಾಧೀನ ಅಧಿಕಾರಿಗಳು ನೀಡಿದ ಪರಿಹಾರಕ್ಕಿಂತ ಹೆಚ್ಚಿನ ಪರಿಹಾರಕ್ಕಾಗಿ ಭೂ ಮಾಲೀಕರು ನ್ಯಾಯಾಲಯಗಳಲ್ಲಿ ದಾವೆ ಸಲ್ಲಿಸಿದ್ದರು.

ಹೆಚ್ಚಿನ ಪ್ರಕರಣಗಳಲ್ಲಿ ನ್ಯಾಯಾಲಯಗಳು ಸರಿಯಾದ ಮಾರುಕಟ್ಟೆ ಮೌಲ್ಯ ಅಥವಾ ಮಾರ್ಗಸೂಚಿ ಮೌಲ್ಯಗಳನ್ನು ಪರಿಗಣಸದೆ ಅತಿಯಾದ ಮತ್ತು ಸಂಶಯಾಸ್ಪದ ಪರಿಹಾರ ವೃದ್ಧಿಯನ್ನು ಮಂಜೂರು ಮಾಡಿದ್ದವು. ಈ ಆದೇಶಗಳನ್ನು ಪ್ರಶ್ನಿಸಲು ರಾಜ್ಯ ಸರ್ಕಾರವು ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ಸ್ಥಾಪನೆಗಳಲ್ಲಿ ನ್ಯಾಯಸಮ್ಮತ ಪರಿಹಾರ ಮತ್ತು ಪಾರದರ್ಶಕತೆ ಕಾಯ್ದೆ ಅಡಿ ಹೈಕೋರ್ಟ್‌ಗಳಿಗೆ ಮೇಲ್ಮನವಿಗಳನ್ನು ಸಲ್ಲಿಸಿತ್ತು.

ಆದರೆ, ಹೆಚ್ಚಿನ ಮೇಲ್ಮನವಿಗಳು 120 ದಿನಗಳ ಅವಧಿ ಮೀರಿದ್ದಾಗಿತ್ತು. ಹೀಗಾಗಿ ಇಂಥ ವಿಳಂಬ ಕ್ಷಮಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿ ಹೈಕೋರ್ಟ್‌ ಆ ಮನವಿಯನ್ನು ವಜಾಗೊಳಿಸಿತ್ತು.

ರಾಜ್ಯದ ಖಜಾನೆ ಮೇಲೆ ಉಂಟಾಗುವ ಗಂಭೀರ ಆರ್ಥಿಕ ಪರಿಣಾಮ ಗಮನಿಸಿದ ರಾಜ್ಯ ಸರ್ಕಾರ, ಈ ಪ್ರಕರಣಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತು. ಇದೀಗ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಸಾವಿರಾರು ಕೋಟಿ ರು.ಗಳ ನಷ್ಟ ತಪ್ಪಿದಂತಾಗಿದ್ದು, ದೊಡ್ಡ ನಿರಾಳ ದೊರೆತಂದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com