Karnataka Budget 2026- ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿ, ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳಿವು...

ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು ಈಗಾಗಲೇ ಸಿದ್ಧತೆ ನಡೆಸುತ್ತಿದ್ದಾರೆ. ಈ ಬಾರಿ 17ನೇ ಸಲ ಬಜೆಟ್ ಮಂಡಿಸುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್​ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
CM Siddaramaiah pre budget meeting
ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವ ಸಿದ್ಧತಾ ಸಭೆ
Updated on

ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ (State Budget) ಮುಹೂರ್ತ ಫಿಕ್ಸ್​​ ಆಗಿದೆ. ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳ ಮಧ್ಯೆ ಬಜೆಟ್ ಅಧಿವೇಶನಕ್ಕೆ (Budget Session) ದಿನಾಂಕ ನಿಗದಿಯಾಗಿದೆ. ಮುಂದಿನ ತಿಂಗಳು ಮಾರ್ಚ್ 6 ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಿನ್ನೆ ನಡೆದ ಬಜೆಟ್ ಅಧಿವೇಶನದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮಾರ್ಚ್‌ 6 ರಂದು ಮುಖ್ಯಮಂತ್ರಿಗಳು ತಮ್ಮ 17ನೇ ದಾಖಲೆಯ ಬಜೆಟ್​ ಮಂಡಿಸಲಿದ್ದಾರೆ. ರಾಜ್ಯ ಹಣಕಾಸು ಖಾತೆಯನ್ನು ಸಹ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಈಗ ಸಾಲು ಸಾಲು ಬಜೆಟ್​​​​ ಪೂರ್ವ ಸಿದ್ಧತಾ ಸಭೆಗಳಲ್ಲಿ ಸಕ್ರಿಯರಾಗಿದ್ದಾರೆ.

CM Siddaramaiah pre budget meeting
ಬಜೆಟ್ ದ್ವಂದ್ವ: VB-G RAM G ಅನುದಾನ ನೀಡಬೇಕೆ, ತಿರಸ್ಕರಿಸಬೇಕೆ? ಸಿದ್ದು ಸರ್ಕಾರಕ್ಕಿರುವ ಸವಾಲು ಏನು? ಆರ್ಥಿಕ ತಜ್ಞರು ಏನಂತಾರೆ?

ದಾಖಲೆಯ 17ನೇ ಬಜೆಟ್​ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು ಈಗಾಗಲೇ ಸಿದ್ಧತೆ ನಡೆಸುತ್ತಿದ್ದಾರೆ. ಈ ಬಾರಿ 17ನೇ ಸಲ ಬಜೆಟ್ ಮಂಡಿಸುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್​ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ಎಲ್ಲಾ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳ ಜೊತೆ ಬಜೆಟ್​ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಸಂಘಟನೆ ಮತ್ತು ಮುಖಂಡರ ಜೊತೆಗೆ ಸಭೆ ನಡೆಸಿದ್ದಾರೆ. ಬಜೆಟ್ ಸಿದ್ದತೆ ವಿಚಾರದಲ್ಲಿ ಸಂಘಟನೆಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಚರ್ಚೆ ಮಾಡಿದ್ದಾರೆ.

CM Siddaramaiah pre budget meeting
ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಏನೂ ಕೊಟ್ಟಿಲ್ಲ, ಚೊಂಬು ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

ಸಂಪುಟ ಸಭೆ ಬಗ್ಗೆ ಮಾಹಿತಿ

ನಿನ್ನೆ ನಡೆದ ಸಚಿವ ಸಂಪುಟ ಸಭೆಯ ಬಗ್ಗೆ ಕಾನೂನು ಸಚಿವ ಹೆಚ್​ಕೆ ಪಾಟೀಲ್​ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನದಿಂದ ಬೀದರ್, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿನ 14 ವರ್ಷ ವಯಸ್ಸಿನ ಹೆಣ್ಣು ಮಕ್ಕಳಿಗೆ HPV ಲಸಿಕೆಯನ್ನು ನೀಡಲು 15.34 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದರು.

ಇದರ ಜೊತೆಗೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ ಇಲ್ಲಿ ಜೀನ್ ಬ್ಯಾಂಕ್​ಗೆ ಅನುಮೋದನೆ ನೀಡದಲಾಗಿದೆ. ಹಾಗೇ 11.12 ಕೋಟಿಗಳ ಅಂದಾಜು ಮೊತ್ತದಲ್ಲಿ ನಬಾರ್ಡ್ ಆರ್ಥಿಕ ನೆರವಿನೊಂದಿಗೆ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಲ್ಲಿ 2000 ಮೆಟ್ರಿಕ್​ ಟನ್ ಸಾಮರ್ಥ್ಯದ ಶೀತಲಗೃಹವನ್ನು ರೂ.10.32 ಕೋಟಿಗಳ ಅಂದಾಜು ಮೊತ್ತದಲ್ಲಿ ನಬಾರ್ಡ್ ಆರ್ಥಿಕ ನೆರವಿನೊಂದಿಗೆ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.

CM Siddaramaiah pre budget meeting
ರಾಜ್ಯ ಬಜೆಟ್ ಸಿದ್ಧತೆ ನಡುವಲ್ಲೇ ಸೈಲೆಂಟಾಗಿದ್ದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನಲೆಗೆ..!

ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಟಿಬಿ ಆಸ್ಪತ್ರೆ ಆವರಣದಲ್ಲಿ ಹೊಸದಾಗಿ ಪ್ರಾರಂಭವಾಗುತ್ತಿರುವ 200 ಹಾಸಿಗೆ ಸಾಮರ್ಥ್ಯದ ಕ್ಯಾನ್ಸರ್ ಆಸ್ಪತ್ರೆಯನ್ನು 330.59 ಕೋಟಿಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ.

ಕಲ್ಲುಗಣಿ ಗುತ್ತಿಗೆ ಪ್ರದೇಶಗಳಲ್ಲಿ ಸಂಚಿತ ಆಡಿಟ್ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ ಉಪಖನಿಜವನ್ನು ತೆಗೆದು ರಾಜಧನವನ್ನು ಪಾವತಿಸದೆ ಸಾಗಾಣಿಕೆ ಮಾಡಿರುವ ಹಾಗೂ ಗುತ್ತಿಗೆ ಪ್ರದೇಶಕ್ಕೆ ಹೊಂದಿಕೊಂಡಂತ್ತೆ ಒತ್ತುವರಿ ಮಾಡಿರುವ ಸಂಬಂಧ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ವಿಧಿಸಿರುವ ದಂಡವನ್ನು ಒಂದು ಬಾರಿ ಪಾವತಿ (One Time Settlement ) ಯೋಜನೆ ಮೂಲಕ ವಸೂಲಿ ಮಾಡಲು, ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು, 1994ಕ್ಕೆ ತಿದ್ದುಪಡಿ ಮಾಡಲು ಮಾರ್ಗಸೂಚಿಗಳನ್ನು ಹೊರಡಿಸಲು ಕ್ಯಾಬಿನೆಟ್ ಅನುಮೋದಿಸಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com