ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿದ್ದ 22 ವರ್ಷದ ಕರ್ನಾಟಕದ ವಿದ್ಯಾರ್ಥಿ ನಾಪತ್ತೆ!

ಸಾಕೇತ್ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಲ್ಲಿ MS ಓದುತ್ತಿದ್ದರು. ಕಳೆದ ಎರಡು ದಿನಗಳಿಂದ ಅವರಿಗೆ ಯಾರೊಂದಿಗೂ ಸಂಪರ್ಕ ಸಾಧ್ಯವಾಗಿಲ್ಲ ಎಂದು ಕುಟುಂಬಸ್ಥರು ಮತ್ತು ಸ್ನೇಹಿತರು ತಿಳಿಸಿದ್ದಾರೆ.
ಸಾಕೇತ್ ಶ್ರೀನಿವಾಸಯ್ಯ
ಸಾಕೇತ್ ಶ್ರೀನಿವಾಸಯ್ಯ
Updated on

ನ್ಯೂಯಾರ್ಕ್: ಕರ್ನಾಟಕ ಮೂಲದ 24 ವರ್ಷದ ವಿದ್ಯಾರ್ಥಿ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದಾರೆ. ಸಾಕೇತ್ ಶ್ರೀನಿವಾಸಯ್ಯ ಅಮೆರಿಕಾದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ನಾಪತ್ತೆಯಾಗಿದ್ದಾರೆ.

ಸಾಕೇತ್ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಲ್ಲಿ MS ಓದುತ್ತಿದ್ದರು. ಕಳೆದ ಎರಡು ದಿನಗಳಿಂದ ಅವರಿಗೆ ಯಾರೊಂದಿಗೂ ಸಂಪರ್ಕ ಸಾಧ್ಯವಾಗಿಲ್ಲ ಎಂದು ಕುಟುಂಬಸ್ಥರು ಮತ್ತು ಸ್ನೇಹಿತರು ತಿಳಿಸಿದ್ದಾರೆ.

ಸಾಕೇತ್ ಕೊನೆಯ ಬಾರಿಗೆ ಫೆಬ್ರವರಿ 12ರಂದು ಕಾಣಿಸಿಕೊಂಡಿದ್ದರು ಎನ್ನಲಾಗಿದ್ದು, ಆ ದಿನ ಅವರು ಕ್ಯಾಲಿಫೋರ್ನಿಯಾದ ಟಿಲ್ಡೆನ್ ರೀಜನಲ್ ಪಾರ್ಕ್‌ನಲ್ಲಿರುವ ಕೆರೆಯ ಬಳಿ ಕಂಡುಬಂದಿದ್ದರು ಎಂದು ಮಾಹಿತಿ ಇದೆ. ಆ ನಂತರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.

ತಾಯಿಗೆ ಸಾಕೇತ್ ಕಾಲ್ ಮಾಡಿದ್ದರು . ಆದರೆ ವಾಪಸ್ ಕರೆ ಮಾಡಿದಾಗ ಮಗ ಪಿಕ್ ಮಾಡಿಲ್ಲ ಎಂದು ಕುಟುಂಬದವರು ಹೇಳಿದ್ದಾರೆ. ಮಗ ಸಂಪರ್ಕಕ್ಕೆ ಸಿಗದಿರುವುದರಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.

ಪಾರ್ಕ್ ಹಿಲ್ಸ್ ನೆರೆಹೊರೆಯ ಮನೆ ಬಾಗಿಲಿನಲ್ಲಿ ಪಾಸ್‌ಪೋರ್ಟ್ ಮತ್ತು ಲ್ಯಾಪ್‌ಟಾಪ್‌ನೊಂದಿಗೆ ಅವರ ಅವರ ಬ್ಯಾಗ್ ಪತ್ತೆಯಾಗಿದೆ ಎಂದು ದಿ ಬರ್ಕ್ಲಿ ಸ್ಕ್ಯಾನರ್ ಸುದ್ದಿ ಪೋರ್ಟಲ್ ವರದಿ ಮಾಡಿದೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಕಾನ್ಸುಲೇಟ್ ಅವರ ಕಣ್ಮರೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.

ಸಾಕೇತ್ ಶ್ರೀನಿವಾಸಯ್ಯ
ಜೈಪುರದಲ್ಲಿ ಇಬ್ಬರು ಜಪಾನಿ ಪ್ರವಾಸಿಗರು ನಾಪತ್ತೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com