ಬಳ್ಳಾರಿ- ಹೊಸಪೇಟೆ ಹೊಸ ರೈಲು ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಇಂದು ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2372 ಕೋಟಿ ರೂ. ವೆಚ್ಚದ ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗಕ್ಕೆ ಅನುಮೋದನೆ ನೀಡಲಾಗಿದೆ.
Centre approves Ballari-Hosapete 3rd and 4th railway line project
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಭೆ, ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗದ ಯೋಜನೆಗೆ ಒಪ್ಪಿಗೆ ನೀಡಿದೆ.

ಇಂದು ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2372 ಕೋಟಿ ರೂ. ವೆಚ್ಚದ ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗಕ್ಕೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಾಹಿತಿ ನೀಡಿದ್ದಾರೆ.

ಈ ಹೊಸ ರೈಲು ಮಾರ್ಗ ಹಂಪಿ (ಯುನೆಸ್ಕೋ ವಿಶ್ವ ಪರಂಪರೆಯ ತಾಣ), ಬಳ್ಳಾರಿ ಕೋಟೆ, ದರೋಜಿ ಕರಡಿ ಧಾಮ, ತುಂಗಭದ್ರಾ ಅಣೆಕಟ್ಟು, ಕೆಂಚನಗುಡ್ಡ, ವಿಜಯ ವಿಠಲ ದೇವಾಲಯ, ಇತ್ಯಾದಿ ಪ್ರಮುಖ ಪ್ರವಾಸಿ ತಾಣಗಳ ಸಂಪರ್ಕವನ್ನು ಸುಧಾರಿಸುತ್ತದೆ. ಅಲ್ಲದೆ, ಕಬ್ಬಿಣದ ಅದಿರು ಸಮೃದ್ಧ ಬಳ್ಳಾರಿ ಪ್ರದೇಶಕ್ಕೆ ಸಂಪರ್ಕವನ್ನು ಉತ್ತಮಗೊಳಿಸುತ್ತದೆ.

Centre approves Ballari-Hosapete 3rd and 4th railway line project
Bengaluru-Pune ಹೈ-ಸ್ಪೀಡ್ ರೈಲು ಮಾರ್ಗಕ್ಕೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ

ವಾರ್ಷಿಕ 25 ಮಿಲಿಯನ್ ಟನ್ ಹೆಚ್ಚುವರಿ ಸರಕು ಸಾಗಣೆಗೆ ಅನುಕೂಲ ಮಾಡಿಕೊಡುತ್ತದೆ. ಈ ಯೋಜನೆಯಿಂದ ಪ್ರತಿ ವರ್ಷ 323 ಕೋಟಿ ಲಾಜಿಸ್ಟಿಕ್ಸ್ ವೆಚ್ಚ ಉಳಿತಾಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com