ಇನ್ನುಮುಂದೆ ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ: CM ಸಿದ್ದರಾಮಯ್ಯ ಘೋಷಣೆ

ಇತಿಹಾಸ ತಿಳಿಯದವರು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ನಾಡು ಸಂಪತ್ಭರಿತವಾಗಿತ್ತು. ನಮ್ಮ ಸರ್ಕಾರ ಕೂಡ ಸಾಹಿತ್ಯ, ಸಂಸ್ಕೃತಿ, ಕಲೆಗೆ ಹೆಚ್ಚಿನ ಒತ್ತು ನೀಡುತ್ತಿದೆ.
Hampi Utsav will be organised every year in November, says CM Siddaramaiah
ಸಿದ್ದರಾಮಯ್ಯ
Updated on

ಹಂಪಿ: 'ವಿಜಯನಗರ ಸಾಮ್ರಾಜ್ಯದ ವೈಭವ, ಇತಿಹಾಸವನ್ನು ಜನರಿಗೆ ತಿಳಿಸುವ ಅಗತ್ಯ ಇದೆ. ಹಿಂದಿನಂತೆ ನವೆಂಬರ್‌ 3, 4 ಮತ್ತು 5ರಂದೇ ಉತ್ಸವವನ್ನು ನಡೆಸುವುದು ಸೂಕ್ತ. ಹೀಗಾಗಿ ನವೆಂಬರ್‌ನಲ್ಲೇ ಮುಂದಿನ ಹಂಪಿ ಉತ್ಸವ ನಡೆಯಲಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಆಯೋಜಿಸಿದ್ದ ಐತಿಹಾಸಿಕ ಹಂಪಿ ಉತ್ಸವ - 2026 ಅನ್ನು ಉದ್ಘಾಟಿಸಿ ಮಾತನಾಡಿದ ಸಿಎಂ, ಇತಿಹಾಸ ತಿಳಿಯದವರು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ನಾಡು ಸಂಪತ್ಭರಿತವಾಗಿತ್ತು. ನಮ್ಮ ಸರ್ಕಾರ ಕೂಡ ಸಾಹಿತ್ಯ, ಸಂಸ್ಕೃತಿ, ಕಲೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ವಿಜಯನಗರ ಕಾಲದಲ್ಲಿ ಸಂಪ್ಭರಿತವಾದ ಹಂಪಿಯ ಹಿರಿಮೆಯನ್ನು ಹಂಪಿ ಉತ್ಸವದಿಂದ ತಿಳಿಯಬಹುದಾಗಿದೆ. ವಿದೇಶಿ ಪ್ರವಾಸಿಗ ಅಬ್ದುಲ್ ರಜಾಕ್‌ರು ವಿಜಯನಗರ ಶ್ರೀಮಂತವಾದ ಸ್ಥಳವಾಗಿತ್ತು ಎಂದು ಉಲ್ಲೇಖಿಸಿದ್ದರು ಎಂದರು.

ರಾಜ್ಯ ಸರ್ಕಾರ ಹಂಪಿ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತಿದೆ. ಮಾಜಿ ಸಚಿವರಾದ ದಿವಂಗತ ಎಂ ಪಿ ಪ್ರಕಾಶ್ ಅವರು ಹಿಂದೆ ಕನ್ನಡ ಮತ್ತು ಸಂಸ್ಕೃತಿಯ ಸಚಿವರಾಗಿದ್ದ ಸಂದರ್ಭದಲ್ಲಿ, ಮೈಸೂರು ದಸರಾ ಉತ್ಸವದ ವಿಜೃಂಭಣೆಯನ್ನು ಕಂಡು, ಇದೇ ರೀತಿಯ ಉತ್ಸವವನ್ನು ಹಂಪಿಯಲ್ಲಿಯೂ ನಡೆಸಬೇಕೆಂದು ಆಶಿಸಿದ್ದರು. ಎಂ ಪಿ ಪ್ರಕಾಶ್ ಅವರು ಕನ್ನಡ ನಾಡು, ನುಡಿ, ಸಾಹಿತ್ಯಗಳಲ್ಲಿ ಅಪಾರ ಆಸಕ್ತಿ ವಹಿಸಿದ್ದರು. ಈ ರೀತಿಯ ಅದ್ಧೂರಿ ಹಂಪಿ ಉತ್ಸವದ ಆಚರಣೆಗೆ ಮೂಲಕಾರಣ ಎಂ ಪಿ ಪ್ರಕಾಶ್ ಅವರು. ಅವರೊಬ್ಬ ಅಪರೂಪದ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Hampi Utsav will be organised every year in November, says CM Siddaramaiah
ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸುವಾಗ ಬೆಂಕಿ; ತಪ್ಪಿದ ಅನಾಹುತ!

ಸಮಾಜದಲ್ಲಿ ಬಡವ - ಶ್ರೀಮಂತ, ಉತ್ತಮ ಮತ್ತು ಕೆಳ ಜಾತಿಗಳೆಂಬ ಬೇಧವಿದೆ. ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸದಿದ್ದರೆ ಸಮಾನ ಅವಕಾಶಗಳು ದೊರೆಯಲು ಸಾಧ್ಯವಾಗುತ್ತಿರಲಿಲ್ಲ. ಸಮಾಜದ ಅಸಮಾನತೆಯನ್ನು ತೊಡೆದುಹಾಕಿದರೆ ಸಮಸಮಾಜ ನಿರ್ಮಾಣ ಸಾಧ್ಯ. 2013 ರಲ್ಲಿ ಮತ್ತು 2023 ರಲ್ಲಿ ಮುಖ್ಯಮಂತ್ರಿಯಾಗಿ ನಾನು ತಂದಿರುವ ಕಾರ್ಯಕ್ರಮಗಳು ಅಸಮಾನತೆಯ ನಿವಾರಣೆಗೆ ಜಾರಿಗೆ ತರಲಾಗಿದೆ ಎಂದರು.

ನಮ್ಮ ಸರ್ಕಾರ ಅನೇಕ ಭಾಗ್ಯ ಯೋಜನೆಗಳನ್ನು ನೀಡಿದ್ದು, 2023 ರಿಂದ ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಇವು ಅಸಮಾನತೆಯನ್ನು ನಿವಾರಿಸುವ ಉದ್ದೇಶ ಹೊಂದಿದ ಯೋಜನೆಗಳು. ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತರಾಗಿಸಲು ಸಾಧ್ಯವಾಗದೇ ಇದ್ದರೆ, ಜಾತಿ ವ್ಯವಸ್ಥೇ ಹೋಗಲಾಡಿಸಲು ಅಸಾಧ್ಯ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ ಸುಮಾರು 60 ಸಾವಿರ ರೂ.ಗಳ ಆರ್ಥಿಕ ಬಲವನ್ನು ತುಂಬುತ್ತಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸುತ್ತಿವೆ ಎಂದರು.

ಸರ್ಕಾರ ಆಚರಿಸುವ ಚಾಲುಕ್ಯ ಉತ್ಸವ, ಹಂಪಿ ಉತ್ಸವ, ಕಿತ್ತೂರು ಉತ್ಸವ, ಆನೆಗುಂದಿ ಉತ್ಸವ, ಬನವಾಸಿ ಉತ್ಸವ, ಮೈಸೂರು ದಸರಾ, ಕರಾವಳಿ ಉತ್ಸವಗಳ ಮೂಲಕ ನಾಡಿನ ಸಾಹಿತ್ಯ, ಕಲೆ, ಸಂಗೀತ ಪರಂಪರೆಗಳನ್ನು ಸಂರಕ್ಷಿಸುವ ದಿಸೆಯಲ್ಲಿ ಮುಖ್ಯವಾಗಿದೆ. ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತ ಪರಂಪರೆ ಕೊಂಡೊಯ್ಯವ ದಿಸೆಯಲ್ಲಿ ಸರ್ಕಾರ ಎಲ್ಲ ರೀತಿಯ ನೆರವು ನೀಡಲು ಬದ್ಧವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com