ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವುದಾಗಿ ಪ್ರಧಾನಿ ಭರವಸೆ: ಗೋವಿಂದ ಕಾರಜೋಳ

ಕೃಷಿ ಸಂಚಯಿನಿ ಯೋಜನೆಯಡಿ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಪ್ರಸ್ತಾವನೆಗೆ ಕೇಂದ್ರದ ಅನುಮೋದನೆ ಪಡೆಯಲು ಮತ್ತು ಹಣವನ್ನು ಬಿಡುಗಡೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕಾರಜೋಳ ತಿಳಿಸಿದರು.
ಪ್ರಧಾನಿ ಭೇಟಿಯಾದ ಗೋವಿಂದ ಕಾರಜೋಳ
ಪ್ರಧಾನಿ ಭೇಟಿಯಾದ ಗೋವಿಂದ ಕಾರಜೋಳ
Updated on

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವ ₹5,300 ಕೋಟಿ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಮನವಿ ಮಾಡಿದ್ದು ಪಿಎಂ ಮೋದಿ ಸಕರಾತ್ಮವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಗುರುವಾರ ನವದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಗೋವಿಂದ್ ಎಂ ಕಾರಜೋಳ, ಕರ್ನಾಟಕದ ರೈತರು, ವಿಶೇಷವಾಗಿ ಚಿತ್ರದುರ್ಗದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅವರಿಗೆ ಮಾಹಿತಿ ನೀಡಿ, ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಮಾಡಿದರು.

ಕೃಷಿ ಸಂಚಯಿನಿ ಯೋಜನೆಯಡಿ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಪ್ರಸ್ತಾವನೆಗೆ ಕೇಂದ್ರದ ಅನುಮೋದನೆ ಪಡೆಯಲು ಮತ್ತು ಹಣವನ್ನು ಬಿಡುಗಡೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕಾರಜೋಳ ತಿಳಿಸಿದರು.

ಮೋದಿ ನಮ್ಮ ಮಾತುಗಳನ್ನು ಬಹಳ ಕಾಳಜಿಯಿಂದ ಆಲಿಸಿದರು. ಯೋಜನೆಗೆ ಸಂಬಂಧಿಸಿದ ಹಿಂದಿನ ಸಂದರ್ಭಗಳನ್ನು ನಾನು ಅವರಿಗೆ ನೆನಪಿಸಿದೆ. ಅವರು ಹಣ ಬಿಡುಗಡೆಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು ಎಂದು ಗೋವಿಂದ್ ಕಾರಜೋಳ ಹೇಳಿದರು. ಹಾವೇರಿ ಸಂಸದ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಅದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಒತ್ತಡ ಹೇರಿದ್ದಾರೆ ಎಂದು ಕಾರಜೋಳ ತಿಳಿಸಿದ್ದಾರೆ.

ಪ್ರಧಾನಿ ಭೇಟಿಯಾದ ಗೋವಿಂದ ಕಾರಜೋಳ
ಚಿಕ್ಕಮಗಳೂರು: ಕಾಫಿ ಎಸ್ಟೇಟ್ ಹರಾಜು ಸ್ಥಗಿತಗೊಳಿಸಲು ಬ್ಯಾಂಕ್ ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಇದಲ್ಲದೆ, ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಯನ್ನು ಅನುಮೋದಿಸಲು ಗಂಭೀರ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಅವರು ಹೇಳಿದರು. ಈ ಹಿಂದೆ ಸಲ್ಲಿಸಲಾದ ಪ್ರಸ್ತಾವನೆಯ ಪ್ರಕಾರ, ಕೇಂದ್ರವು 5,300 ಕೋಟಿ ರೂ.ಗಳ ಅನುದಾನವನ್ನು ನೀಡಬೇಕಿತ್ತು. ಈಗ, ಪರಿಷ್ಕೃತ ಪ್ರಸ್ತಾವನೆಯ ಪ್ರಕಾರ, ಈ ಮೊತ್ತವು ಏರಿಳಿತಗೊಳ್ಳುವ ಸಾಧ್ಯತೆಯಿದೆ.

ರಾಜ್ಯ ಸರ್ಕಾರವು 21,167 ಕೋಟಿ ರೂ.ಗಳ ಪರಿಷ್ಕೃತ ಪ್ರಸ್ತಾವನೆಯನ್ನು ಸಲ್ಲಿಸಿದೆ. ರಾಜ್ಯ ಸರ್ಕಾರವು ಈಗಾಗಲೇ ಈ ಯೋಜನೆಗೆ ಹನಿ ನೀರಾವರಿ ಹೊರತುಪಡಿಸಿ 10,000 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಉಳಿದ 11,000 ಕೋಟಿ ರೂ.ಗಳಲ್ಲಿ ಕೇಂದ್ರವು ಶೇ. 60 ರಷ್ಚು ಸಹಾಯವನ್ನು ಒದಗಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com