CM ಕುರ್ಚಿ ಕಾಳಗದ ನಡುವೆ ಸಿದ್ದರಾಮಯ್ಯ ಬಜೆಟ್​​ಗೆ ಮುಹೂರ್ತ ಫಿಕ್ಸ್

ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ತಮ್ಮ ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಲು ಸಜ್ಜಾಗಿದ್ದಾರೆ.
CM Siddaramaih
ಬಜೆಟ್ ಪ್ರತಿಯೊಂದಿಗೆ ಸಿಎಂ ಸಿದ್ದರಾಮಯ್ಯ(ಸಂಗ್ರಹ ಚಿತ್ರ)
Updated on

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟದ ನಡುವೆ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ.

ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ತಮ್ಮ ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಲು ಸಜ್ಜಾಗಿದ್ದಾರೆ.

ಮಾರ್ಚ್ 6 ಬೆಳಗ್ಗೆ 10:15ಕ್ಕೆ ಬಜೆಟ್​ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 27ಕ್ಕೆ ಅಂತ್ಯವಾಗಲಿದೆ. ಒಟ್ಟು 14 ದಿನ ಬಜೆಟ್ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

CM Siddaramaih
ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ: ಇಂದಿನಿಂದ ಸಿಎಂ ವಿವಿಧ ಇಲಾಖೆಗಳ ಜೊತೆ ಪೂರ್ವಭಾವಿ ಸಭೆ

ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ 16 ಬಾರಿ ಬಜೆಟ್​ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ತಮ್ಮ 17ನೇ ಬಜೆಟ್​ ಮಂಡನೆಗೆ ತಯಾರಿ ನಡೆಸುತ್ತಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್​ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com