ಕೊಪ್ಪಳ: ಇಸ್ರೇಲಿ ಮಹಿಳೆ ಅತ್ಯಾಚಾರ, ವಿದೇಶಿಗನ ಕೊಲೆ ಪ್ರಕರಣ; 3 ಅಪರಾಧಿಗಳಿಗೆ ಗಲ್ಲು ಶಿಕ್ಷೆ, 9 ತಿಂಗಳಲ್ಲೇ ಐತಿಹಾಸಿಕ ತೀರ್ಪು!

ಇಂದು ಗಂಗಾವತಿ 1ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಮೂವರು ಅಪರಾಧಿಗಳಾದ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ
ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ
Updated on

ಕೊಪ್ಪಳ: ವಿಶ್ವವಿಖ್ಯಾತ ಹಂಪಿಯ ಬಳಿ ಇಸ್ರೇಲಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ಅಮೆರಿಕ ಪ್ರಜೆಯ ಕೊಲೆ ಪ್ರಕರಣದ ಅಪರಾಧಿಗಳಿಗೆ ಗಂಗಾವತಿ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. ಕೇವಲ 9 ತಿಂಗಳಲ್ಲೇ ಗಂಗಾವತಿ ಕೋರ್ಟ್​ ಈ ಐತಿಹಾಸಿಕ ತೀರ್ಪು ನೀಡಿದೆ. ಕಳೆದ ಫೆಬ್ರವರಿ 6ರಂದು ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು.

ಇಂದು ಗಂಗಾವತಿ 1ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಮೂವರು ಅಪರಾಧಿಗಳಾದ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

2025ರ ಮಾರ್ಚ್ ನಲ್ಲಿ ಕೊಪ್ಪಳದ ಗಂಗಾವತಿ ತಾಲೂಕಿನ ಹಂಪಿಯ ಸಾಣಾಪೂರ ಬಳಿ ಇಸ್ರೇಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದರು. ಇದೇ ವೇಳೆ ಅಮೆರಿಕದ ವ್ಯಕ್ತಿಯನ್ನು ಕೊಲೆ ಮಾಡಲಾಗಿತ್ತು. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮಲ್ಲೇಶ್, ಸಾಯಿ ಹಾಗೂ ಶರಣಪ್ಪ ಮೂವರ ವಿರುದ್ಧ ಅತ್ಯಾಚಾರ, ಕೊಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಗಂಗಾವತಿಯ ಹೆಚ್ಚುವರಿ ಸತ್ರ ನ್ಯಾಯಾಲಯವು, ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಈ ಮೂವರಿಗೂ ಗಲ್ಲು ಶಿಕ್ಷೆ ವಿಧಿಸಿದೆ.

ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ
ಶಿವಮೊಗ್ಗ: 40 ಸಾವಿರ ಲಂಚಕ್ಕೆ ಕೈಯೊಡುತ್ತಿದ್ದ KAS ಅಧಿಕಾರಿ ಸೇರಿ ಇಬ್ಬರು Lokayukta ಬಲೆಗೆ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com