ಕೊನೆಗೂ ಈಡೇರಿತು ಬೆಂಗಳೂರು ರೈಲು ಪ್ರಯಾಣಿಕರ ಬಹುಕಾಲದ ಬೇಡಿಕೆ: ನಾಯಂಡಹಳ್ಳಿ ನಿಲ್ದಾಣದಲ್ಲಿ 4 ರೈಲುಗಳ ಹೆಚ್ಚುವರಿ ನಿಲುಗಡೆ!

ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗಾಗಿ ಪ್ರಯಾಣಿಕರು ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಇಂದು ಆ ಬೇಡಿಕೆ ಈಡೇರಿದ ಹಿನ್ನೆಲೆ ಪ್ರಯಾಣಿಕರಲ್ಲಿ ಸಂತಸ ಮೂಡಿದೆ.
file image
ಸಂಗ್ರಹ ಚಿತ್ರ
Updated on

ಬೆಂಗಳೂರು: ಬೆಂಗಳೂರಿನ ನಾಯಂಡಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ಕಲ್ಪಿಸುವ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಇಂದಿನಿಂದ ನಾಲ್ಕು ಪ್ರಮುಖ ಎಕ್ಸ್‌ಪ್ರೆಸ್ ರೈಲುಗಳು ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆ ಮಾಡಲಿವೆ.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮಂಗಳವಾರ ನಾಲ್ಕು ಎಕ್ಸ್‌ಪ್ರೆಸ್ ರೈಲುಗಳ ಪ್ರಾಯೋಗಿಕ ನಿಲುಗಡೆಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಇದುವರೆಗೆ ನಾಯಂಡಹಳ್ಳಿ ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲುಗಳು ಮಾತ್ರ ನಿಲ್ಲುತ್ತಿದ್ದವು.

ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗಾಗಿ ಪ್ರಯಾಣಿಕರು ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಇಂದು ಆ ಬೇಡಿಕೆ ಈಡೇರಿದ ಹಿನ್ನೆಲೆ ಪ್ರಯಾಣಿಕರಲ್ಲಿ ಸಂತಸ ಮೂಡಿದೆ. ಮೈಸೂರು–ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್ ರೈಲಿಗೆ ಸಚಿವರು ಸಾಂಕೇತಿಕವಾಗಿ ಚಾಲನೆ ನೀಡಿದರು.

ಮೈಸೂರು-ಕೆಎಸ್ಆರ್ ಬೆಂಗಳೂರು ಸಿಟಿ ಚಾಮುಂಡಿ ಎಕ್ಸ್‌ಪ್ರೆಸ್ (16215/16216), ಮೈಸೂರು-ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್ (17307/17308), ತೂತ್ತುಕುಡಿ–ಮೈಸೂರು ಎಕ್ಸ್‌ಪ್ರೆಸ್ (16235/1 6236) ಮತ್ತು ಮೈಸೂರು-ಪಂಢರಪುರ ಗೋಲ್‌ ಗುಂಬಜ್‌ ಎಕ್ಸ್‌ಪ್ರೆಸ್ (16535/16535) ರೈಲುಗಳಿಗೆ ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ರೈಲ್ವೆ ಇಲಾಖೆ ಒಪ್ಪಿಗೆ ಸೂಚಿಸಿದೆ.

file image
ಹುಚ್ಚಾಟ: ಕೇರಳದಲ್ಲಿ ರೈಲು ನಿಲ್ಲಿಸಿ ರೀಲ್ಸ್ ಮಾಡಿದ ಇಬ್ಬರ ವಿರುದ್ಧ ಪ್ರಕರಣ ದಾಖಲು

1. ರೈಲು ಸಂಖ್ಯೆ 16215 ಮೈಸೂರು - ಕೆಎಸ್ಆರ್ ಬೆಂಗಳೂರು ಚಾಮುಂಡಿ ಎಕ್ಸ್‌ಪ್ರೆಸ್ ಬೆಳಿಗ್ಗೆ 08:45 ಕ್ಕೆ ನಾಯಂಡಹಳ್ಳಿಗೆ ಆಗಮಿಸಿ 08:46 ಕ್ಕೆ ಹೊರಡಲಿದೆ. ರೈಲು ಸಂಖ್ಯೆ 16216 ಕೆಎಸ್ಆರ್ ಬೆಂಗಳೂರು - ಮೈಸೂರು ಚಾಮುಂಡಿ ಎಕ್ಸ್‌ಪ್ರೆಸ್ ಸಂಜೆ 06:39 ಕ್ಕೆ ಆಗಮಿಸಿ 06:40 ಕ್ಕೆ ಹೊರಡಲಿದೆ.

2. ರೈಲು ಸಂಖ್ಯೆ 17307 ಮೈಸೂರು - ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್ ಮಧ್ಯಾಹ್ನ 03:16 ಕ್ಕೆ ನಾಯಂಡಹಳ್ಳಿಗೆ ಆಗಮಿಸಿ 03:17 ಕ್ಕೆ ಹೊರಡಲಿದೆ. 16.02.2026 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 17308 ಬಾಗಲಕೋಟೆ - ಮೈಸೂರು ಬಸವ ಎಕ್ಸ್‌ಪ್ರೆಸ್ ಬೆಳಿಗ್ಗೆ 08:19 ಕ್ಕೆ ನಾಯಂಡಹಳ್ಳಿಗೆ ಆಗಮಿಸಿ 08:20 ಕ್ಕೆ ಹೊರಡಲಿದೆ.

3. ರೈಲು ಸಂಖ್ಯೆ 16235 ಟುಟಿಕೋರಿನ್ - ಮೈಸೂರು ಎಕ್ಸ್‌ಪ್ರೆಸ್ ಬೆಳಿಗ್ಗೆ 06:49 ಕ್ಕೆ ನಾಯಂಡಹಳ್ಳಿಗೆ ಆಗಮಿಸಿ 06:50 ಕ್ಕೆ ಹೊರಡಲಿದೆ. ರೈಲು ಸಂಖ್ಯೆ 16236 ಮೈಸೂರು - ಟುಟಿಕೋರಿನ್ ಎಕ್ಸ್‌ಪ್ರೆಸ್ ರಾತ್ರಿ 08:14 ಕ್ಕೆ ಆಗಮಿಸಿ 08:15 ಕ್ಕೆ ಹೊರಡಲಿದೆ.

4. ರೈಲು ಸಂಖ್ಯೆ 16535 ಮೈಸೂರು - ಪಂಢರಪುರ ಗೋಲ್ ಗುಂಬಜ್ ಎಕ್ಸ್‌ಪ್ರೆಸ್ ಸಂಜೆ 05:40 ಕ್ಕೆ ನಾಯಂಡಹಳ್ಳಿಗೆ ಆಗಮಿಸಿ 05:41 ಕ್ಕೆ ಹೊರಡಲಿದೆ. ರೈಲು ಸಂಖ್ಯೆ 16536 ಪಂಢರಪುರ - ಮೈಸೂರು ಗೋಲ್ ಗುಂಬಜ್ ಎಕ್ಸ್‌ಪ್ರೆಸ್ ಬೆಳಿಗ್ಗೆ 07:44 ಕ್ಕೆ ಆಗಮಿಸಿ ಬೆಳಿಗ್ಗೆ 07:45 ಕ್ಕೆ ಹೊರಡುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com