ಚಿತ್ರದುರ್ಗ: ಶಾಲಾ ವಸತಿ ನಿಲಯದ 3ನೇ ಮಹಡಿಯಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿ ಸಾವು; Video

ಮೃತ ವಿದ್ಯಾರ್ಥಿಯನ್ನು ಕೊಟ್ರೇಶ್ ಎಂದು ಗುರುತಿಸಲಾಗಿದ್ದು, ಡಿವಿಎಸ್ ರೆಸಿಡೆನ್ಷಿಯಲ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಪೊಲೀಸರ ಮಾಹಿತಿ ಪ್ರಕಾರ, ಘಟನೆ ನಿನ್ನೆ ಬೆಳಗ್ಗೆ ಸುಮಾರು 7:15ಕ್ಕೆ ನಡೆದಿದೆ.
Kotresh
ಮೃತ ಬಾಲಕ ಕೊಟ್ರೇಶ್
Updated on

ಚಿತ್ರದುರ್ಗ ಜಿಲ್ಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಶಾಲೆಯ ವಸತಿ ನಿಲಯದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಸಂಬಂಧ ಶಾಲಾ ಆಡಳಿತ ಮತ್ತು ಇತರರ ವಿರುದ್ಧ ನಿರ್ಲಕ್ಷ್ಯದ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ.

ಮೃತ ವಿದ್ಯಾರ್ಥಿಯನ್ನು ಕೊಟ್ರೇಶ್ ಎಂದು ಗುರುತಿಸಲಾಗಿದ್ದು, ಡಿವಿಎಸ್ ರೆಸಿಡೆನ್ಷಿಯಲ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಪೊಲೀಸರ ಮಾಹಿತಿ ಪ್ರಕಾರ, ಘಟನೆ ನಿನ್ನೆ ಬೆಳಗ್ಗೆ ಸುಮಾರು 7:15ಕ್ಕೆ ನಡೆದಿದೆ.

ತನಿಖಾಧಿಕಾರಿಗಳು ಪರಿಶೀಲಿಸಿದ ಸಿಸಿಟಿವಿ ದೃಶ್ಯಗಳಲ್ಲಿ, ವಿದ್ಯಾರ್ಥಿ ವಸತಿ ನಿಲಯದ ರೇಲಿಂಗ್ ಬಳಿ ನಡೆದು ಬಂದು ಕೆಲ ಕ್ಷಣಗಳು ನಿಂತು ಬಳಿಕ ಬಾಲಕ ಜಿಗಿದಿರುವುದು ಕಂಡುಬಂದಿದೆ. ಅದಕ್ಕೂ ಮೊದಲು ದಾರಿಯಲ್ಲಿ ಹಲವಾರು ಬಾರಿ ಅಲೆದಾಡುತ್ತಿರುವುದು ಕಂಡುಬಂದಿದ್ದು, ಒತ್ತಡದಲ್ಲಿದ್ದಂತೆ ತೋರುತ್ತಿದೆ.

ವಿದ್ಯಾರ್ಥಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ, ಶಾಲಾ ಆಡಳಿತ, ವಾರ್ಡನ್, ಮುಖ್ಯೋಪಾಧ್ಯಾಯರು ಹಾಗೂ ಸಹಪಾಠಿಯ ವಿರುದ್ಧ ನಿರ್ಲಕ್ಷ್ಯ ಸೇರಿದಂತೆ ಸಂಬಂಧಿತ ಆರೋಪಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಮ್ಮ ದೂರಿನಲ್ಲಿ, ತಮ್ಮ ಮಗನಿಗೆ ಸಹಪಾಠಿಯೊಂದಿಗೆ ಜಗಳವಾಗಿತ್ತು. ವಾಗ್ವಾದದ ವೇಳೆ ಆ ಸಹಪಾಠಿ ಚಪ್ಪಲಿಯಿಂದ ಹೊಡೆದು, ಕಬ್ಬಿಣದ ರಾಡ್‌ನಿಂದ ದಾಳಿ ಮಾಡಲು ಪ್ರಯತ್ನಿಸಿದ್ದಾನೆ ಎಂದು ತಂದೆ ಆರೋಪಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ವಿದ್ಯಾರ್ಥಿಯ ಕುಟುಂಬದವರು ಮತ್ತು ಕೆಲವು ಸ್ನೇಹಿತರೂ ಶಾಲೆಯ ವಾರ್ಡನ್ ಹಾಗೂ ಮುಖ್ಯೋಪಾಧ್ಯಾಯರು ಅವನ ಮೇಲೆ ಒತ್ತಡ ಹಾಕುತ್ತಿದ್ದರು ಎಂಬುದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆಯ ಸಂಪೂರ್ಣ ಹಿನ್ನೆಲೆ ಮತ್ತು ದೂರಿನಲ್ಲಿ ಹೆಸರು ಉಲ್ಲೇಖಗೊಂಡಿರುವವರ ಪಾತ್ರ ಹಾಗೂ ಜವಾಬ್ದಾರಿಗಳನ್ನು ತಿಳಿದುಕೊಳ್ಳಲು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com