

ಬೆಳಗಾವಿ: ಕರ್ನಾಟಕ-ಗೋವಾ ಗಡಿಯಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂಪಾಯಿ ದರೋಡೆ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದ್ದು, ತನಿಖಾಧಿಕಾರಿಗಳು ಈಗ ದರೋಡೆಯೇ ನಡೆದಿಲ್ಲ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಖಾನಾಪುರದ ಚೋರ್ಲಾ ಘಾಟ್ ಬಳಿ ಈ ದರೋಡೆ ನಡೆದಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ದೂರಿನ ತನಿಖೆಗಾಗಿ ಮಹಾರಾಷ್ಟ್ರ ಸರ್ಕಾರ ರಚಿಸಿದ್ದ ಎಸ್‌ಐಟಿ ಹೇಳಿದೆ ಎಂದು ವರದಿಯಾಗಿದೆ.
ಸುಮಾರು ಒಂದು ತಿಂಗಳ ಕಾಲ ನಡೆದ ತನಿಖೆಯ ನಂತರ, ಸ್ಥಳದಲ್ಲಿ ಯಾವುದೇ ದರೋಡೆ ನಡೆದಿಲ್ಲ ಎಂದು ಹೇಳುವ ವರದಿಯನ್ನು ಎಸ್‌ಐಟಿ ಸಲ್ಲಿಸಿದೆ ಎಂದು ತಿಳಿದುಬಂದಿದೆ.
ದೂರುದಾರ ಸಂದೀಪ್ ದತ್ತ ಪಾಟೀಲ್ ಅವರ ಹೇಳಿಕೆಯಲ್ಲಿ ಸ್ಥಳ, ಸಮಯ, ಪ್ರಯಾಣ ಮಾರ್ಗ ಮತ್ತು ಕರೆ ದಾಖಲೆಗಳಲ್ಲಿನ ವಿರೋಧಾಭಾಸಗಳು ಸೇರಿದಂತೆ ಗಂಭೀರ ವ್ಯತ್ಯಾಸ ಇರುವುದನ್ನು ತನಿಖೆ ಬಹಿರಂಗಪಡಿಸಿದೆ.
ಈ ತನಿಖೆಯ ಆಧಾರದ ಮೇಲೆ, ಚೋರ್ಲಾ ಘಾಟ್‌ನಲ್ಲಿ ಯಾವುದೇ ದರೋಡೆ ನಡೆದಿಲ್ಲ ಎಂದು ಎಸ್‌ಐಟಿ ಸ್ಪಷ್ಟಪಡಿಸಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟವರನ್ನು ನ್ಯಾಯಾಲಯ ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಈ ಪ್ರಕರಣವು ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡರಲ್ಲೂ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಈ ದೊಡ್ಡ ಪ್ರಮಾಣದ ದರೋಡೆಯ ಹಣ ಕಾಂಗ್ರೆಸ್, ಬಿಜೆಪಿಗೆ ಸೇರಿದ್ದು ಎಂದು ಎರಡೂ ಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡಿದ್ದವು. ಸುಳ್ಳು ದೂರು ದಾಖಲಿಸಿದ್ದಕ್ಕಾಗಿ ನಾಸಿಕ್ ಪೊಲೀಸರು ಪಾಟೀಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ, ಹೊಸ ತಿರುವು ಎಂಬಂತೆ, ದತ್ತ ಪಾಟೀಲ್ ಅವರು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದು ಎಫ್‌ಐಆರ್ ದಾಖಲಿಸಿ ನ್ಯಾಯಯುತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಮಹಾರಾಷ್ಟ್ರ ಎಸ್‌ಐಟಿ ಪಾರದರ್ಶಕ ತನಿಖೆ ನಡೆಸಿಲ್ಲ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಆಡಿಯೋ ರೆಕಾರ್ಡಿಂಗ್‌ಗಳನ್ನು ತಮ್ಮ ಬಳಿ ಇವೇ ಎಂದು ಹೇಳಿಕೊಂಡಿದ್ದಾರೆ. ಇವುಗಳ ಆಧಾರದ ಮೇಲೆ ಮರು ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಅಕ್ಟೋಬರ್ 25, 2025 ರಂದು ಬೆಳಗಾವಿ ಜಿಲ್ಲೆಯ ಚೋರ್ಲಾ ಘಾಟ್ ಬಳಿ ಎರಡು ಕಂಟೇನರ್‌ಗಳಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 400 ಕೋಟಿ ರೂಪಾಯಿ ಹಣವನ್ನು ಲೂಟಿ ಮಾಡಲಾಗಿದೆ ಎಂದು ನಾಸಿಕ್ ಮೂಲದ ಉದ್ಯಮಿ ಸಂದೀಪ್ ದತ್ತ ಪಾಟೀಲ್ ಅವರು ಮಹಾರಾಷ್ಟ್ರ ಪೊಲೀಸರಿಗೆ ದೂರು ನೀಡಿದ ನಂತರ ವಿವಾದ ಭುಗಿಲೆದ್ದಿತು.
ನಗದು ಹಣವನ್ನು ಗುಜರಾತ್ ಮೂಲದ ಬಿಲ್ಡರ್ ಕಿಶೋರ್ ಸಾವ್ಲಾ ಸೇಠ್ ಅವರಿಗೆ ಸೇರಿದ್ದು, ಇದರಲ್ಲಿ ರದ್ದಾದ 2,000
Advertisement