ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ನಿಯಂತ್ರಣ: ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕುವ ಯತ್ನ ಎಂದ ಬಿಜೆಪಿ

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು ಅಥವಾ ಶಾಸಕರನ್ನು ವಿಧಾನಸೌಧದ ಇತರ ಯಾವುದೇ ಸ್ಥಳದಲ್ಲಿ ಹಿಂಬಾಲಿಸಿ ಪ್ರತಿಕ್ರಿಯೆ ತೆಗೆದುಕೊಳ್ಳಬಾರದು ಎಂದು ನಿಯಮ ತಂದಿದೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ನಿಯಂತ್ರಣ: ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕುವ ಯತ್ನ ಎಂದ ಬಿಜೆಪಿ
Updated on

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು ರಾಜಕೀಯ ನಾಯಕರ ಪ್ರತಿಕ್ರಿಯೆಗಳನ್ನು (News byte) ಪೋರ್ಟಿಕೋ ಅಥವಾ ಕೆಂಗಲ್ ಗೇಟ್ ಬಳಿಯ ನಿಗದಿತ ಸ್ಥಳದಲ್ಲಿ ಮಾತ್ರ ತೆಗೆದುಕೊಳ್ಳಬೇಕು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು ಅಥವಾ ಶಾಸಕರನ್ನು ವಿಧಾನಸೌಧದ ಇತರ ಯಾವುದೇ ಸ್ಥಳದಲ್ಲಿ ಹಿಂಬಾಲಿಸಿ ಪ್ರತಿಕ್ರಿಯೆ ತೆಗೆದುಕೊಳ್ಳಬಾರದು ಎಂದು ನಿಯಮ ತಂದಿದೆ.

ಸರ್ಕಾರದ ಈ ನಡೆ ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಖಂಡಿಸಿದ್ದಾರೆ. ಮಾಧ್ಯಮಗಳು ಜನರ ಮತ್ತು ಸರ್ಕಾರದ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತವೆ.

ಕಳೆದ ವಾರ ವಿಧಾನಸೌಧದಲ್ಲಿ ನಡೆದ ಭದ್ರತಾ ಲೋಪಗಳನ್ನು ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ನೆಪವಾಗಿ ಬಳಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಸರ್ಕಾರವು ತನ್ನ ಲೋಪಗಳನ್ನು ಸರಿಪಡಿಸಿಕೊಳ್ಳುವ ಬದಲು ಮಾಧ್ಯಮಗಳ ಮೇಲೆ ನಿಯಂತ್ರಣ ಹೇರುತ್ತಿರುವುದು ಸರಿಯಲ್ಲ. ಇದು ಕಾಂಗ್ರೆಸ್ ಪಕ್ಷವು ತುರ್ತು ಪರಿಸ್ಥಿತಿಯ ಸಮಯದಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಿದ ಇತಿಹಾಸವನ್ನು ನೆನಪಿಸುತ್ತದೆ ಎಂದು ಆಕ್ಷೇಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com